Asianet Suvarna News Asianet Suvarna News

ಬೆಳಗಾವಿ: ಹುಕ್ಕೇರಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರೀ ಬೆಂಕಿ

ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ| ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ| ಬೆಂಕಿ ನಂದಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿ| 

Fire on Waste Disposal Unit in Hukkeri in Belagavi District
Author
Bengaluru, First Published Feb 24, 2020, 12:12 PM IST

ಹುಕ್ಕೇರಿ(ಫೆ.24): ಹುಕ್ಕೇರಿ ಹೊರವಲಯದ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಹೊತ್ತಿಕೊಂಡ ಬೆಂಕಿಯಿಂದ ಭಾರೀ ಅನಾಹುತ ತಪ್ಪಿದ್ದು ಈ ಪ್ರದೇಶದಲ್ಲಿ ಕೆಲಕಾಲ ಭಯದ ವಾತಾವರಣ ಸೃಷ್ಟಿಯಾಗಿತ್ತು. 

ಹುಕ್ಕೇರಿ-ಬೆಲ್ಲದ ಬಾಗೇವಾಡಿ ರಸ್ತೆಗೆ ಹೊಂದಿಕೊಂಡಿರುವ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹೊಗೆ ಮಿಶ್ರಿತ ಬೆಂಕಿ ಕಾಣಿಸಿಕೊಂಡಿದ್ದು ಕ್ರಮೇಣ ಹೊಗೆಯ ವ್ಯಾಪ್ತಿ ಘಟಕ ವ್ಯಾಪ್ತಿಯನ್ನೂ ಮೀರಿ ಅಕ್ಕಪಕ್ಕದ ಪ್ರದೇಶ ಮತ್ತು ರಸ್ತೆಗೂ ವಿಸ್ತರಿಸಿದೆ. ಇದರಿಂದ ರಸ್ತೆ ಮೂಲಕ ಸಂಚರಿಸುವ ವಾಹನ ಹಾಗೂ ಸವಾರರಲ್ಲಿ ಭಯವನ್ನುಂಟು ಮಾಡಿತ್ತು. 

ಇನ್ನು ಬೆಂಕಿ ಕೆನ್ನಾಲಿಯೂ ಸಹ ವಿಸ್ತರಣೆಯಾಗತೊಡಗಿತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಪುರಸಭೆ ಅಧಿಕಾರಿಗಳು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ನಂದಿಸುವ ವಾಹನ ಕರೆಯಿಸಿದರು. ಅಗ್ನಿ ಶಾಮಕ ದಳ ವಾಹನ ಸಮಯಕ್ಕೆ ಸರಿಯಾಗಿ ಬರದೇ ಇದ್ದಲ್ಲಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಇರುವ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಯಂತ್ರೋಪಕರಣ, ಸಾಧನ ಸಲಕರಣೆಗಳು ಬೆಂಕಿಗೆ ಆಹುತಿಯಾಗು ಸಾಧ್ಯತೆಯಿತ್ತು ಎಂದು ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಸದಸ್ಯರಾದ ಸದಾಶಿವ ಕರೆಪ್ಪಗೋಳ, ಆನಂದ ಗಂಧ ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇನ್ನು ಈ ಘಟನೆಯಿಂದ ಪಕ್ಕದಲ್ಲೇ ಇರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ವಿದ್ಯುತ್ ಪರಿವರ್ತಕಕ್ಕೆ ಒಂದು ವೇಳೆ ಬೆಂಕಿ ಹೊತ್ತಿಕೊಂಡಿದ್ದರೆ ಹಾನಿಯ ಅಂದಾಜು ನೀರಿಕ್ಷೆಗೂ ಹೆಚ್ಚಾಗುವ ಸಂಭವವಿತ್ತು. ಬೆಂಕಿ ಮತ್ತು ಹೊಗೆಯನ್ನು ನಂದಿಸಲು ಅಗ್ನಿ ಶಾಮಕ ದಳ ರಾತ್ರಿ 8.30ರ ವರೆಗೂ ಹರಸಾಹಸ ಪಟ್ಟರು.ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಈ ಪ್ರಮಾಣದ ಬೆಂಕಿ ಮತ್ತು ಹೊಗೆ ಹೊತ್ತಿಕೊಳ್ಳಲು ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. 

ಇನ್ನು ತ್ಯಾಜ್ಯ ವಿಲೇವಾರಿ ಘಟಕವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದು ಪ್ರಮುಖ ಕಾರಣ ಎಂಬ ದೂರುಗಳು ಕೇಳಿ ಬಂದಿವೆ. ಮುಂದಿನ ದಿನಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಈ ರೀತಿಯ ಅನಾಹುತ ಸಂಭವಿಸದಂತೆ ಪುರಸಭೆ ಅಧಿಕಾರಿಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Follow Us:
Download App:
  • android
  • ios