ಪುತ್ತೂರು(ನ.27): ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳ ತಂಡವೊಂದು ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಎಂಬಲ್ಲಿ‌ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೋರೆ ಮಾಲೀಕ ಖಾದರ್(45) ಎಂಬುವರ ಮೇಲೆ ಫೈರಿಂಗ್ ನಡೆದಿದೆ. 

ಹಳೆ ದ್ವೇಷದ ಹಿನ್ನೆಲೆಯಲ್ಲಿ ಖಾದರ್ ಅವರ ಮೇಲೆ ಮಹಾರಾಷ್ಟ್ರ ‌ನೋಂದಣಿಯ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಚಿತ ವ್ಯಕ್ತಿಯೊಬ್ಬ ಮನೆಯ ಬಳಿಗೆ ಬಂದು ಮಾತನಾಡಲು ಖಾದರ್ ಅವರನ್ನ ಹೊರಗೆ ಕರೆದಿದ್ದಾರೆ. 

ಖಾದರ್ ಮನೆಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿದ್ದ ತಂಡ ಫೈರಿಂಗ್ ನಡೆಸಿದ್ದಾರೆ. ವಿಟ್ಲ ನಿವಾಸಿ ಸಾದಿಕ್ ತಂಡದಿಂದ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಣಕಾಸು ವಿಚಾರಕ್ಕೆ ಇಬ್ಬರ ಮಧ್ಯೆ ಹಲವು ಬಾರಿ ನಡೆದಿದ್ದ ಜಗಳ ನಡೆದಿತ್ತು ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗುಂಡಿನ ದಾಳಿಯಿಂದ ಗಂಭೀರ ಗಾಯಗೊಂಡ ಖಾದರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಪುತ್ತೂರು ನಗರದ ಜನ ಭಯಭೀತರಾಗಿದ್ದಾರೆ.