ಚಿಕ್ಕಮಗಳೂರಲ್ಲಿ ಕೊರೋನಾಕ್ಕೆ ಮೊದಲ ಬಲಿ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೊರೋನಾದಿಂದಾಗಿ ಮೊದಲ ಸಾವು ಸಂಭವಿಸದೆ. ಗುರುವಾರ(ಜೂನ್ 18)ದಂದು 72 ವರ್ಷದ ಮಹಿಳೆ ಕೊರೋನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಚಿಕ್ಕಮಗಳೂರು(ಜೂ.19): ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಗುರುವಾರ 72 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇದೇ ಮೊದಲ ಸಾವಿನ ಪ್ರಕರಣವಾಗಿದೆ. ಮೃತಪಟ್ಟವೃದ್ಧೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಡಣಾಯಕಪುರ ಗ್ರಾಮದವರು. ಅವರ ಪುತ್ರನಲ್ಲೂ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ತನ್ನ ಮಗಳ ಮನೆಯಲ್ಲಿ ವೃದ್ಧೆ ಕಳೆದ ಮೂರು ತಿಂಗಳಿಂದ ವಾಸವಾಗಿದ್ದರು. ಈ ಮನೆಯ ಎದುರಿದ್ದ ವೃದ್ಧೆ ಕೊರೋನಾದಿಂದ ಮೃತಪಟ್ಟಿದ್ದರು. ಈ ವೃದ್ಧೆಯೊಂದಿಗೆ ಸಂಪರ್ಕದಲ್ಲಿದ್ದ ಈ ಡಣಾಯಕಪುರ ಗ್ರಾಮದ ವೃದ್ಧೆ ಕಳೆದ ನಾಲ್ಕು ದಿನಗಳ ಹಿಂದೆ ತನ್ನ ಮಗನ ಮನೆಗೆ ಬಂದಿದ್ದಾರೆ.
ಮಗ ಹಾಗೂ ವೃದ್ಧೆಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಅವರನ್ನು ಸ್ಥಳೀಯ ವೈದ್ಯಾಧಿಕಾರಿಗಳು ಸಂಪರ್ಕಿಸಿ ಸಂಶಯದ ಮೇಲೆ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಅಂಶ ಕಂಡು ಬಂದಿದೆ. ಆದ್ದರಿಂದ ಬುಧವಾರ ಸಂಜೆ ಅವರನ್ನು ಕರೆದುಕೊಂಡು ಬಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ ವೃದ್ಧೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ
ಗೌತಮ್ ತಿಳಿಸಿದ್ದಾರೆ.
ಕೊರೋನಾ ಮಹಾಸ್ಫೋಟ: ಬೆಂಗಳೂರಿಗರೇ ಎಚ್ಚರ, ಕ್ವಾರಂಟೈನ್‌ಗೆ ಜಾಗವೇ ಸಿಗ್ತಿಲ್ಲ..!
ಮೂರು ಪಾಸಿಟಿವ್:
ಜಿಲ್ಲೆಯಲ್ಲಿ ಗುರುವಾರ 3 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ವೃದ್ಧೆ ಮೃತಪಟ್ಟಿದ್ದಾರೆ. ಅವರ ಮಗನಲ್ಲೂ ಸೋಂಕು ಕಾಣಿಸಿಕೊಂಡಿದೆ. ಹಾಗೂ ಮಹಾರಾಷ್ಟ್ರದಿಂದ ಬಂದಿರುವ ಒಬ್ಬರಲ್ಲಿ ಕೋವಿಡ್ ಸೋಂಕಿದೆ ಎಂದು ಹೇಳಿದ್ದಾರೆ.
11 ಜನ ಸಂಪರ್ಕ:
ಕಳೆದ ನಾಲ್ಕು ದಿನಗಳ ಹಿಂದೆ ವೃದ್ಧೆ ತನ್ನ ಮಗನ ಮನೆಗೆ ಬಂದಿದ್ದಾರೆ. ಅದಕ್ಕೂ ಮುನ್ನ ಈ ವೃದ್ಧೆಯ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು 11 ಮಂದಿಯನ್ನು ಗುರುತಿಸಲಾಗಿದ್ದು, ಅವರೆಲ್ಲರೂ ಶಿವಮೊಗ್ಗದವರೆಂದು ಹೇಳಲಾಗುತ್ತಿದೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"