ಯಾದಗಿರಿ(ಏ.21): ಟಂಟಂ ಆಟೋ ಹಾಗೂ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳುರು (ಎಂ) ಗ್ರಾಮದ ಬಳಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನ ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40), ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುನಮುಟಗಿ ಗ್ರಾಮದಿಂದ ಕೊಲ್ಲೂರು ಗ್ರಾಮಕ್ಕೆ ಆಟೋದಲ್ಲಿ ತೆರಳುತ್ತಿದ್ದ ಕಾರ್ಮಿಕರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಮೂವರ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಸಮೀಪದ ದೇವದುರ್ಗ ಹಾಗೂ ರಾಯಚೂರಿನ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. 

ಚಿಂಚೋಳಿ: ಶವಸಂಸ್ಕಾರಕ್ಕೆ ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ, ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

ಮೃತರು ನಸುಮಾರು 10ರಿಂದ 15 ಜನ ಈ ಕೃಷಿ ಕಾರ್ಮಿಕರರಾಗಿದ್ದು, ಕೊಳ್ಳುರ ಗ್ರಾಮಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.