ಮಂಗಳೂರು: ಶಾಲಾ ಬಸ್, ರಿಕ್ಷಾ ನಡುವೆ ಭೀಕರ ಅಪಘಾತ, ಐವರ ದುರ್ಮರಣ
ಪೆರ್ಲ ಕಡೆಯಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿ ಈ ಘಟನೆ ಸಂಭವಿಸಿದೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಅನತಿ ದೂರದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಮಂಗಳೂರು(ಸೆ.26): ಶಾಲಾ ಬಸ್ ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐವರು ದಾರುಣವಾಗಿ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಸಂಜೆ ಕೇರಳ ಕಾಸರಗೋಡಿನ ಬದಿಯಡ್ಕ ಸಮೀಪದ ಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ.
ತಾಯಲಂಗಡಿ ನಿವಾಸಿ ಪ್ರಸ್ತುತ ಮೊಗ್ರಾಲಿನಲ್ಲಿ ವಾಸಿಸುವ ರಿಕ್ಷಾ ಡ್ರೈವರ್ ಅಬ್ದುಲ್ ರವೂಫ್ (58), ಪ್ರಯಾಣಿಕರಾದ ಮೊಗ್ರಾಲಿನ ಉಸ್ಮಾನ್ ಎಂಬವರ ಪತ್ನಿ ಭಿಪಾತಿಮ್ಮ (50), ಷೇಕ್ ಅಲಿ ಎಂಬವರ ಪತ್ನಿ ಭಿಪಾತಿಮ್ಮ (60), ಇಸ್ಮಾಯಿಲ್ ಅವರ ಪತ್ನಿ ಉಮ್ಮು ಅಲಿಮಾ, ಬೆಳ್ಳೂರು ಅಬ್ಬಾಸ್ ಎಂಬವರ ಪತ್ನಿ ನಫೀಸಾ ಮೃತಪಟ್ಟಿರುವ ಮಾಹಿತಿ ಲಭಿಸಿದೆ.
ಧಾರವಾಡ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಸಾವು
ಪೆರ್ಲ ಕಡೆಯಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿ ಈ ಘಟನೆ ಸಂಭವಿಸಿದೆ. ಮಕ್ಕಳನ್ನು ಪೆರ್ಲ ಭಾಗದಲ್ಲಿ ಇಳಿಸಿದ ಶಾಲಾ ಬಸ್ ಖಾಲಿಯಾಗಿ ಸಂಚರಿಸುತ್ತಿದ್ದಾಗ ಪಳ್ಳತ್ತಡ್ಕದ ಗುಳಿಗ ಬನದ ಅನತಿ ದೂರದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.
ಅಪಘಾತ ನಡೆದೊಡನೆ ಮೃತರ ಪರಿಚಯದ ಮಾಹಿತಿ ಲಭಿಸದೆ ಗುರುತು ಪತ್ತೆ ಹಚ್ಚಲು ಕೆಲ ಕಾಲ ಪರದಾಡಬೇಕಾಯಿತು. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಸಂಪೂರ್ಣ ನುುಜ್ಜು ಗುಜ್ಜಾಗಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.