ಬೆಳ್ತಂಗಡಿ [ಆ.19]: ಈ ಬಾರಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಅವಾಂತರವನ್ನೇ ಸೃಷ್ಟಿ ಮಾಡಿತ್ತು.  ದಕ್ಷಿಣ ಕನ್ನಡದ ಮಳೆಯಿಂದ ಬೆಳ್ತಂಗಡಿಯಲ್ಲಿ ಕೊಚ್ಚಿ ಹೋಗಿದ್ದ 53 ವರ್ಷದ ಹಳೆಯ ಸೇತುವೆ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 

ಮೂರು ದಿನದಲ್ಲಿ ಬಂಜಾರುಮಲೆ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಹರೀಶ್ ಪೂಂಜಾ ಆಶಯದಂತೆ ಕಬ್ಬಿಣದ ಸೇತುವೆ ನಿರ್ಮಾಣವಾಗಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಣಿಯೂರು ಹೊಳೆಗೆ 42 ಅಡಿ ಉದ್ದ, 4 ಅಡಿ ಅಗಲದ ಸೇತುವೆಯನ್ನು 5 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. 

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಸೂಚನೆ ಮೇರೆಗೆ ಜಿಲ್ಲಾಡಳಿತ ಸೇತುವೆ ನಿರ್ಮಿಸುವ ಮೂಲಕ ಮಾದರಿಯಾಗಿದೆ.

ರಾಜ್ಯದ 17 ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆ ಪ್ರವಾಹ ಪರಿಸ್ಥಿತಿ ಸೃಷ್ಟಿ ಮಾಡಿತ್ತು. ಈ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯೂ ತತ್ತರಿಸಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಎದುರಿಸಿತ್ತು.