ಬೆಂಗಳೂರು [ಆ.09]: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕಾ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾಸಂಘ ನಗರದ ಲಾಲ್‌ಬಾಗ್‌ನಲ್ಲಿ ಹಮ್ಮಿಕೊಂಡಿರುವ ಜಯಚಾಮರಾಜ ಒಡೆಯರ್‌ ಅವರ ಜೀವನ ಕುರಿತ ಫಲಪುಷ್ಪ ಪ್ರದರ್ಶನ ಆ.9ರಿಂದ ಆರಂಭವಾಗಲಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಚಿಕ್ಕಪೇಟೆ ಶಾಸಕ ಉದಯ್‌ ಬಿ.ಗರುಡಾಚಾರ್‌ ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌, ಸಂಸದ ತೇಜಸ್ವಿ ಸೂರ್ಯ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಪಾಲಿಕೆ ಸದಸ್ಯ ವಾಣಿ ವಿ.ರಾವ್‌ ಭಾಗವಹಿಸಲಿದ್ದಾರೆ.