ಮೈಸೂರು (ಮೇ.10): ಕೋವಿಡ್-19 ವಿಚಾರದಲ್ಲಿ ಜನರು ಉದಾಸೀನ ಮಾಡಬಾರದು. ಸರ್ಕಾರದ ಸೂಚನೆ  ಪಾಲನೆ ಮಾಡಬೇಕು ಎಂದು ಸುತ್ತೂರು ಮಠದ  ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ  ಹೇಳಿದರು. 

ಸರ್ಕಾರ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಂತೆ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಆಕ್ಸಿಜನೇಟೆಡ್ ಹಾಸಿಗೆ ಹೆಚ್ಚಿಸುವ ಸಂಬಂಧ ಇಂದು ಮೈಸೂರಿನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು ಕೊರೋನಾ ಬಗ್ಗೆ ಜಾಗೃತರಾಗಿರಲು ತಿಳಿಸಿದರು.  

ನಿಯಂತ್ರಣ ಕ್ರಮಗಳನ್ನು ಮೀರಿ ಕೊರೋನ ವ್ಯಾಪಕವಾಗಿ ಹರಡುತ್ತಿದೆ. ಹೇಗೆ ನಿಯಂತ್ರಿಸುವುದು ಎಂಬುದು ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ಶ್ರೀಗಳು ಹೇಳಿದರು. 

ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಆಕ್ಸಿಜನ್ ಹಂಚಿಕೆ : ST ಸೋಮಶೇಖರ್ ...

ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಜಿಲ್ಲಾಡಳಿತದ ಮಾರ್ಗದರ್ಶನದಂತೆ ಎಲ್ಲಾ ಸೌಲಭ್ಯ ಕೊಡಲಾಗಿದೆ. 400 ಕ್ಕೂ ಹೆಚ್ಚು ಹಾಸಿಗೆ ನೀಡಲಾಗಿದೆ. ಈ ಪೈಕಿ ಸುಮಾರು100 ಆಕ್ಸಿಜನೇಟೆಡ್ ಹಾಸಿಗೆಗಳಿವೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್   ಮತ್ತು ಸಂಸದರು ಹಾಗೂ ಶಾಸಕರ ಮನವಿ ಮೇರೆಗೆ ಮಾನವೀಯತೆಯ ದೃಷ್ಟಿಯಿಂದ ಒಂದೆರೆಡು ದಿನದಲ್ಲಿ ಇನ್ನೂ ನೂರು ಹೆಚ್ಚಿಸಲಾಗುವುದು. ಒಂದು ವಾರದಲ್ಲಿ ಆಕ್ಸಿಜನೇಟೆಡ್ ಹಾಸಿಗೆಗಳ ಸಂಖ್ಯೆಯನ್ನು 300ಕ್ಕೆ ಹೆಚ್ಚಿಸಲಾಗುವುದು ಎಂದರು.

ಮೈಸೂರು : ಬೇರೆ ಜಿಲ್ಲೆಯಿಂದ ಬರುವವರೆಗೆ ಪ್ರವೇಶ ನಿಷೇಧ ...

ಲಿಕ್ವಿಡ್ ಆಕ್ಸಿಜನ್ ಘಟಕವನ್ನು ದ್ವಿಗುಣಗೊಳಿಸಲು ಏಜೆನ್ಸಿ ಸಂಪರ್ಕಿಸಿದ್ದೇವೆ. ಅದು ಸ್ಥಾಪನೆಯಾದರೆ ಕೇಂದ್ರದಿಂದ ನೇರವಾಗಿ ಆಕ್ಸಿಜನ್ ಪೂರೈಕೆ ಯಾಗುತ್ತದೆ ಎಂದರು. 

ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಿದ ಅವಧಿಯಲ್ಲಿ ಜನರು ಮುಗಿಬೀಳುತ್ತಿದ್ದಾರೆ ಎಂಬ ವರದಿ ಬರುತ್ತಿದೆ. ಹಾಗಾಗಬಾರದು, ಗ್ರಾಮೀಣ ಮತ್ತು ನಗರ ಭಾಗದ ಜನರು ಕಳಕಳಿಯಿಂದ ವರ್ತಿಸುವ ಮೂಲಕ ಈ ಸೋಂಕು ನಿವಾರಣೆಗೆ ಸಹಕರಿಸಬೇಕು ಎಂದು    ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona