ಕೋಲಾರ ಹಾಸ್ಟೆಲ್‌ನಲ್ಲಿ ಫುಡ್‌ ಪಾಯ್ಸನ್‌: ವಾಂತಿ ಬೇಧಿಯಿಂದ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಕೋಲಾರ ನಗರದ ದರ್ಗಾ ಮೊಹಲ್ಲಾ ಮೌಲನಾ ಆಜಾಧ್ ವಸತಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಇನ್ನು ವಸತಿ ನಿಲಯದಲ್ಲಿ ಫುಡ್ ಪಾಯಸನ್ ಆಗಿ 9 ಮಕ್ಕಳು ಆಸ್ಪತ್ರೆಗೆ ದಾಖಲು ಆಗಿದ್ದಾರೆ. 

Food poisoning in Kolar Muslim Hostel Students admitted to hospital due to vomiting sat

ಕೋಲಾರ (ಫೆ.17): ಕೋಲಾರ ನಗರದ ದರ್ಗಾ ಮೊಹಲ್ಲಾ ಮೌಲನಾ ಆಜಾಧ್ ವಸತಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಇನ್ನು ವಸತಿ ನಿಲಯದಲ್ಲಿ ಫುಡ್ ಪಾಯಸನ್ ಆಗಿ 9 ಮಕ್ಕಳು ಆಸ್ಪತ್ರೆಗೆ ದಾಖಲು ಆಗಿದ್ದಾರೆ. 

ವಸತಿ ನಿಲಯದಲ್ಲಿ ಮದ್ಯಾಹ್ನ ಊಟ ಸೇವಿಸಿರುವ ಮಕ್ಕಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ವೇಳೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಚಿತ್ರಾನ್ನ ಸೇವಿಸಿದ್ದಾರೆ. ಊಟ ಸೇವಿಸುತ್ತಿದ್ದಂತೆ ಹೊಟ್ಟೆ ನೋವು ಆರಂಭವಾಗಿ ಸುಸ್ತಾಗಿ ಮಲಗಿದ್ದಾರೆ. ಇತ್ತೀಚೆಗೆ ಮಂಗಳೂರಿನ ಸಿಟಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ವಿಷಾಹಾರ ಸೇವನೆ ಮಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ವಿರುದ್ಧ ತೀವ್ರ ಕ್ರಮವನ್ನು ಕೈಗೊಳ್ಳಲಾಗಿತ್ತು.

ಪರೋಟಾ ತಿಂದು ಫುಡ್ ಅಲರ್ಜಿ, ಕೇರಳದ ವಿದ್ಯಾರ್ಥಿನಿ ಸಾವು

 

ಪ್ರತ್ಯೇಕ ಅಡುಗೆಯಲ್ಲಿ ಸಮಸ್ಯೆ: ಸಾಮಾನ್ಯವಾಗಿ ಮಧ್ಯಾಹ್ನದ ಅಡುಗೆಯನ್ನು ಮಾಡಿದ್ದ ಅಡುಗೆ ಸಿಬ್ಬಂದಿ ಎಲ್ಲ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಮಾಡಿ ಇಟ್ಟಿದ್ದ ಚಿತ್ರಾನ್ನ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಒಂಭತ್ತು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪ್ರತ್ಯೇಕವಾಗಿ ಚಿತ್ರಾನ್ನ ಮಾಡಿ ಕೊಟ್ಟಿದ್ದಾರೆ. ಆದರೆ, ನಂತರ ಮಾಡಿದ ಚಿತ್ರಾನ್ನವನ್ನು ಸೇವನೆ ಮಾಡಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಈ ಘಟನೆಯ ಬಗ್ಗೆ ತಿಳಿದ ಹಾಸ್ಟೆಲ್‌ ವಾರ್ಡನ್‌ ಹಾಗೂ ಅಡುಗೆ ಸಹಾಯಕ ಸಿಬ್ಬಂದಿ ಅಸ್ವಸ್ಥಗೊಂಡ ಹಾಸ್ಟೆಲ್‌ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

100 ವಿದ್ಯಾರ್ಥಿನಿಯರು ಅಸ್ವಸ್ಥ: ಮಂಗಳೂರು (ಫೆ.07): ನಗರದ ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಫುಡ್ ಪಾಯ್ಸನ್ ಪ್ರಕರಣ ಸಂಬಂಧ ಸಿಟಿ ಹಾಸ್ಪಿಟಲ್ ಮತ್ತು ಸಿಟಿ ನರ್ಸಿಂಗ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಡಳಿತ ಮಂಡಳಿ ವಿರುದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ದೂರು ನೀಡಿದ್ದರು. ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ವಾಂತಿ ಭೇದಿ ಕಂಡು ಬಂದರೂ ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ ಆರೋಪ ಮಾಡಲಾಗಿದೆ. ಶಕ್ತಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಸುಧಾಂಶು ಹಾಸ್ಟೆಲ್ ಗೆ ಭೇಟಿ ನೀಡಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ ಆರೋಗ್ಯಾಧಿಕಾರಿ ಸೂಚನೆ ನಿರ್ಲಕ್ಷಿಸಿರುವ ಬಗ್ಗೆ ಪ್ರಕರಣದಲ್ಲಿ ಉಲ್ಲೇಖ ಮಾಡಲಾಗಿದೆ. 

ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಆಡಳಿತ ಮಂಡಳಿ: ಸಿಟಿ ನರ್ಸಿಂಗ್ ಕಾಲೇಜು ಮತ್ತು ಸಿಟಿ ಹಾಸ್ಪಿಟಲ್ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಜಿಲ್ಲಾಡಳಿತಕ್ಕೆ ಸೂಕ್ತ ಮಾಹಿತಿ ನೀಡದೇ ನಿರ್ಲಕ್ಷ್ಯ ಆರೋಪ ವ್ಯಕ್ತವಾಗಿದೆ. ಒಟ್ಟು 231 ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದರು.‌ ಇವರಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 116 ವಿದ್ಯಾರ್ಥಿಗಳು ಸದ್ಯ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, 115 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Mangaluru: ಫುಡ್ ಪಾಯ್ಸನ್‌ಗೆ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹಾಸ್ಟೆಲ್‌ಗೆ ಪ್ರತ್ಯೇಕ ವೈದ್ಯಕೀಯ ತಂಡ ನಿಯೋಜನೆ: ಆಸ್ಪತ್ರೆಗೆ ಭೇಟಿ ನೀಡಿರುವ ಅಧಿಕಾರಿಗಳ ತಂಡ ಈಗಾಗಲೇ ವಿದ್ಯಾರ್ಥಿಗಳು ವಾಸಿಸುತ್ತಿರುವ ವಿದ್ಯಾರ್ಥಿ ನಿಲಯಕ್ಕೆ ವಿಶೇಷ ವೈದ್ಯಕೀಯ ತಂಡವನ್ನು ಅಂಬುಲೆನ್ಸ್ ಸಹಿತ ಕಳುಹಿಸಿ ಉಳಿದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದೆ. ಆಹಾರ ಸುರಕ್ಷತಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್, ಜಂಟಿಯಾಗಿ ಆಹಾರ ತಯಾರಿಸುವ ಅಡುಗೆ ಕೋಣೆಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲಿಸಿ ಆಡುಗೆ ಮಾಡಿ ಇಟ್ಟಿದ್ದ ವಿವಿಧ ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಿದ್ದಾರೆ. 

Latest Videos
Follow Us:
Download App:
  • android
  • ios