ಕಾಡಾನೆ ಹಿಮ್ಮೆಟ್ಟಿಸಲು 4 ಜಿಲ್ಲೆಗಳಲ್ಲಿ ಟಾಸ್ಕ್ ಫೋರ್ಸ್ ರಚನೆ
ರಾಜ್ಯದಲ್ಲಿ ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು (ನ. 21) : ರಾಜ್ಯದಲ್ಲಿ ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಕಾಡಾನೆ ಹಾವಳಿ ತಡೆಗಟ್ಟುವ ಕುರಿತು ಹಿರಿಯ ಅರಣ್ಯ ಅಧಿಕಾರಿ (Forest officer)ಗಳೊಂದಿಗೆ ಸಭೆಯನ್ನು ನಡೆಸಿದ ಬೆನ್ನಲ್ಲೇ ಆನೆಯ ದಾಳಿ (Elefant Attack) ಹೆಚ್ಚಾಗಿರುವ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್ ಫೋರ್ಸ್ (Task force) ಗಳನ್ನು ರಚಿಸುವ ಕುರಿತು ಆದೇಶ ಹೊರಡಿಸಲಾಗಿದೆ. ಜೊತೆಗೆ ಈ ಕಾರ್ಯಪಡೆಗಳು ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ತಕ್ಷಣದಿಂದಲೇ ನಿರ್ವಹಿಸುವಂತೆಯೂ ಆದೇಶ ಹೊರಡಿಸಲಾಗಿದೆ.
Chikkamagaluru: ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ: ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಮೇಲೆ ಹಲ್ಲೆ?
ಟಾಸ್ಕ್ ಫೋರ್ಸ್ (ಕಾರ್ಯಪಡೆ) ಸಮಿತಿ ಕಾರ್ಯಗಳು:
1. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್ ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು.
2. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನ ಗಳ ಬಗ್ಗೆ ಮಾಹಿತಿ ನೀಡುವುದು.
3. ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು.
4. ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆಯನ್ನು ಜನರಿಗೆ ಪ್ರಚುರಪಡಿಸುವುದು.
5. ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸುವುದು.
6. ಅರಣ್ಯ ಪಡೆ ಮುಖ್ಯಸ್ಥರು ಕೂಡಲೇ ಜಿಲ್ಲಾ ಟಾಸ್ಕ್ ಫೋರ್ಸ್ ಗೆ ವಲಯ ಮತ್ತು ಉಪವಲಯ ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ರಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಬೇಕು.
7. ಆನೆ ಹಾವಳಿ ಪ್ರದೇಶಗಳಿಗೆ ತಲುಪಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್ ಗೆ ಮೂರು ಬೊಲೆರೋ ಜೀಪ್ ಒದಗಿಸುವುದು.
8. ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸುವುದು.
9. ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯುವುದು.
10. ಕಾರ್ಯಪಡೆಗಳು ತಮ್ಮ ಪ್ರತಿಯೊಂದು ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು.