ಅಭಿವೃದ್ಧಿ, ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕ್ರಮಗಳು ಸ್ವಾಗತಾರ್ಹ. ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ನೀಡಲಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ 

Former CM HD Kumaraswamy React to Union Budget 2024 grg

ರಾಮನಗರ(ಫೆ.02):  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕ್ರಮಗಳು ಸ್ವಾಗತಾರ್ಹ. ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ನೀಡಲಾಗಿದೆ ಎಂದು ಹೇಳಿದರು.

Union Budget 2024: ವಿದೇಶಗಳಿಗೆ 2023-24ರಲ್ಲಿ ಭಾರತದಿಂದ 8990 ಕೋಟಿ ರೂಪಾಯಿ ಸಾಲ!

ಹಿಂದಿನ ಐದು ವರ್ಷದ ಆಡಳಿತದಲ್ಲಿ ಯಾವ ಯಾವ ವಲಯಕ್ಕೆ ಶಕ್ತಿ ತುಂಬಿದ್ದೇವೆ ಎಂಬ ಮಾಹಿತಿಯನ್ನು ಹಣಕಾಸು ಸಚಿವರು ನೀಡಿದ್ದಾರೆ. ಯುವಜನತೆ ಸೇರಿ ಹಲವು ವರ್ಗಕ್ಕೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಭರವಸೆ ನೀಡಿದ್ದಾರೆ. ಉತ್ಪಾದನಾ ಕ್ಷೇತ್ರದ ಓಟಕ್ಕೆ ಇಂಬು ಕೊಡಲಾಗಿದೆ ಎಂದು ಹೇಳಿದರು.

ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸುವೆ:

ರಾಜ್ಯದ ಅಭಿವೃದ್ಧಿ ಬಗ್ಗೆ ಮುಂದಿನ ದಿನಗಳಲ್ಲಿ ಕೇಂದ್ರ ಬಿಜೆಪಿ ನಾಯಕರ ಜತೆ ಮುಕ್ತವಾಗಿ ಚರ್ಚಿಸುತ್ತೇನೆ. ಇದು ಮಧ್ಯಂತರ ಬಜೆಟ್. ಹಾಗಾಗಿ ಚುನಾವಣೆ ಬಳಿಕ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸುವೆ. ನನಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಅರಿವಿದೆ. ಎಲ್ಲಿ ಅನ್ಯಾಯವಾಗಿದೆ, ಅದೆಲ್ಲವನ್ನೂ ಸರಿಪಡಿಸುವಲ್ಲಿ ಕೇಂದ್ರದ ಮನವೊಲಿಸುತ್ತೇವೆ. ಪ್ರಾಮಾಣಿಕವಾಗಿ ರಾಜ್ಯದ ಜನತೆ ಪರ ಧ್ವನಿ ಎತ್ತುತ್ತೇನೆ. ಅದರ ಜತೆಗೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾದಾಗ ಕರ್ನಾಟಕಕ್ಕೆ ಬಹಳಷ್ಟು ಪ್ರಮಾಣದಲ್ಲಿ ನೆರವು ಸಿಗುತ್ತದೆ ಎನ್ನುವ ನಿರೀಕ್ಷೆ ನನಗಿದೆ ಎಂದು ಕುಮಾರಸ್ವಾಮಿ ಹೇಳಿದರು.

Latest Videos
Follow Us:
Download App:
  • android
  • ios