Asianet Suvarna News Asianet Suvarna News

ಯಾದಗಿರಿಯಲ್ಲಿ ವಂದೇ ಭಾರತ್‌ ನಿಲುಗಡೆಗೆ ಕುಮಾರಸ್ವಾಮಿ ಮನವಿ

ಕಲಬುರಗಿ ಲೋಕಸಭಾ ವ್ಯಾಪ್ತಿಗೆ ಬರುವ ಗುರುಮಠಕಲ್‌ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್‌ ಅವರು ಯಾದಗಿರಿಯಲ್ಲಿ ವಂದೇ ಭಾರತ್‌ ರೈಲು ನಿಲ್ಲಿಸುವಂತೆ ಮನವಿ ಮಾಡಿದ್ದು, ಈ ಭಾಗದ ಪ್ರಮುಖ ಜಿಲ್ಲಾ ಕೇಂದ್ರವಾದ ಯಾದಗಿರಿಯಲ್ಲಿ ಈ ರೈಲು ನಿಲುಗಡೆಗೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸುವಂತೆ ಎಚ್ಡಿಕೆ ಕೋರಿದ್ದಾರೆ.

Former CM HD Kumaraswamy Request to stop Vande Bharat Train in Yadagir grg
Author
First Published Mar 13, 2024, 11:19 PM IST

ಯಾದಗಿರಿ(ಮಾ.13):  ಕಲಬುರಗಿಯಿಂದ-ಬೆಂಗಳೂರುವರೆಗೆ ಸಂಚರಿಸಲಿರುವ ವಂದೇ ಭಾರತ್‌ ಎಕ್ಸಪ್ರೆಸ್‌ ರೈಲನ್ನು ಯಾದಗಿರಿ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ರ ಬರೆದು, ಕೋರಿದ್ದಾರೆ.

ರೈಲ್ವೆ ಇಲಾಖೆಯು ನಿಮ್ಮ ನೇತೃತ್ವದಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವುದು ಶ್ಲಾಘನೀಯ. ಮಂಗಳವಾರದಿಂದ ಆರಂಭಗೊಂಡ ಕಲಬುರಗಿ-ಬೆಂಗಳೂರು ನಡುವಿನ ವಂದೇ ಭಾರತ್‌ ಎಕ್ಸಪ್ರೆಸ್ ರೈಲು ಈ ಭಾಗದಲ್ಲಿ 76 ವರ್ಷಗಳ ನಂತರ ಇತಿಹಾಸ ಸೃಷ್ಟಿಸಿದಂತಾಗಿದೆ ಎಂದು ಎಚ್ಡಿಕೆ ಸಚಿವರನ್ನು ಶ್ಲಾಘಿಸಿದ್ದಾರೆ.

ಯಾದಗಿರಿಯಲ್ಲಿ ನಡೆಯಬೇಕಿದ್ದ ರಿಯಾಲಿಟಿ ಕೊನೆ ಕ್ಷಣದಲ್ಲಿ ರದ್ದು; ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಕಿಡಿ

ಅಲ್ಲದೆ, ಕಲಬುರಗಿ ಲೋಕಸಭಾ ವ್ಯಾಪ್ತಿಗೆ ಬರುವ ಗುರುಮಠಕಲ್‌ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್‌ ಅವರು ಯಾದಗಿರಿಯಲ್ಲಿ ವಂದೇ ಭಾರತ್‌ ರೈಲು ನಿಲ್ಲಿಸುವಂತೆ ಮನವಿ ಮಾಡಿದ್ದು, ಈ ಭಾಗದ ಪ್ರಮುಖ ಜಿಲ್ಲಾ ಕೇಂದ್ರವಾದ ಯಾದಗಿರಿಯಲ್ಲಿ ಈ ರೈಲು ನಿಲುಗಡೆಗೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸುವಂತೆ ಎಚ್ಡಿಕೆ ಕೋರಿದ್ದಾರೆ.

Follow Us:
Download App:
  • android
  • ios