ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ?: ಡಿಕೆಶಿಗೆ ಎಚ್‌ಡಿಕೆ ಟಾಂಗ್‌

ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ. ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ ಎಂದು ಕಿಡಿಕಾರಿದ ಕುಮಾರಸ್ವಾಮಿ

Former CM HD Kumaraswamy Slams DCM DK Shivakumar grg

ರಾಮನಗರ(ಅ.26):  ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅರಿತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ. ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಸಂಜೆ 6 ಗಂಟೆ ಮೇಲೆ ಎಲ್ ಹೋಗ್ತಾರೆ? ಹೆಚ್‌ಡಿಕೆ ತಿರುಗೇಟು!

ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ತೀಕ್ಷಣವಾಗಿ ಅವರು ಪ್ರಶ್ನಿಸಿದ್ದಾರೆ.

1983ಕ್ಕೆ ಮೊದಲು ಸ್ಥಿತಿ ಹೇಗಿತ್ತು?:

ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ದೇವೇಗೌಡರಿಗೆ ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನುದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು. ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ ಎಂದು ಪ್ರಶ್ನಿಸಿದ್ದಾರೆ.

ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದು ಕಿಡಿಕಾರಿದ್ದಾರೆ.

ಶ್ರೀಗಳ ಹೆಸರು ಹೇಳುವ ನೈತಿಕತೆ ಇಲ್ಲ:

ನಾಡಪ್ರಭು ಕೆಂಪೇಗೌಡರು, ಕೆಂಗಲ್‌ ಹನುಮಂತಯ್ಯನವರು, ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂತಹ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು "ರಿಯಲ್‌ ಎಸ್ಟೇಟ್‌ ಪಾಪಕುಂಡ"ವನ್ನಾಗಿ ಮಾಡಿದ್ದು ಯಾರು? ಈ ಪುಣ್ಯಪುರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಡಿಸಿಎಂ ಡಿಕೆಶಿ ಹೇಳಿಕೆಗೆ ಮಾಜಿ ಸಿಎಂ ಎಚ್ಡಿಕೆ ತಿರುಗೇಟು

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ''''ದುಷ್ಟ''''ಪ್ರಜ್ಞೆ, ''''ಅತಿ'''' ಬುದ್ಧಿವಂತಿಕೆ, ''''ಅಸಾಮಾನ್ಯ'''' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ದರ್ಪದ ಮಾತು ಹೇಳಿದ್ದಾರೆ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂತಹುದು ಎಂಬುದು ಜನಜನಿತ ಎಂದು ವ್ಯಂಗ್ಯವಾಡಿದ್ದಾರೆ.

ನಾನು ಮತ್ತೊಮ್ಮೆ ಸಿಎಂ ಆಗಬೇಕೋ, ಬೇಡವೋ ಚೌಡೇಶ್ವರಿ ದೇವಿ ಇಚ್ಛೆ: ಎಚ್‌ಡಿಕೆ

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ''''ದುಷ್ಟ''''ಪ್ರಜ್ಞೆ, ''''ಅತಿ'''' ಬುದ್ಧಿವಂತಿಕೆ, ''''ಅಸಾಮಾನ್ಯ'''' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ ಎಂದು ಶಿವಕುಮಾರ್ ಹೇಳುತ್ತಾರೆ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ ಎಂದು ಡಿಕೆಶಿಗೆ ಟಾಂಗ್‌ ಕೊಟ್ಟಿದ್ದಾರೆ.

Latest Videos
Follow Us:
Download App:
  • android
  • ios