Asianet Suvarna News Asianet Suvarna News

ಬೆಂಗ್ಳೂರು ಮಳೆ ಮುನ್ಸೂಚನೆ ಇದ್ದರೂ ಕ್ಯಾರೇ ಎನ್ನದ ಸರ್ಕಾರ: ಎಚ್‌ಡಿಕೆ

*  ಬೆಂಗಳೂರು ನಗರದಲ್ಲಿ 7 ಸಚಿವರಿದ್ದರೂ ಪ್ರಯೋಜನವಿಲ್ಲ
*  ಕೊಟ್ಟ ಅನುದಾನ ಏನಾಯ್ತು?
*  ಇಂದಿನಿಂದ ಒಂದು ವಾರ ನಗರ ಪ್ರದಕ್ಷಿಣೆ
 

Former CM HD Kumaraswamy Slams on Karnataka BJP Government grg
Author
Bengaluru, First Published May 20, 2022, 5:45 AM IST

ಬೆಂಗಳೂರು(ಮೇ.20): ಮಳೆ ಅನಾಹುತದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಇದ್ದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ರಾಜಧಾನಿ ಬೆಂಗಳೂರಿನಲ್ಲಿ ಏಳು ಮಂದಿ ಸಚಿವರಿದ್ದಾರೆ. ಅವರು ಏನು ಮಾಡುತ್ತಿದ್ದಾರೆ? ಅವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದ ಕೋಟ್ಯಂತರ ರೂಪಾಯಿ ಅನುದಾನ ಎಲ್ಲಿ ಹೋಯಿತು ಎಂದೂ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಏಳು ಜನ ಸಚಿವರು ನಿನ್ನೆಯಿಂದ ಏನಾದರೂ ಶಾಸಕರ, ಅಧಿಕಾರಿಗಳ ಸಭೆ ಕರೆದಿದ್ದಾರಾ? ಸಭೆ ನಡೆಸುವ ಕನಿಷ್ಠ ಸೌಜನ್ಯವೂ ಇಲ್ಲವೇ ಅವರಿಗೆ? ನಾಡಿನ ಜನತೆಗೆ ಏನು ಸಂದೇಶ ಕೊಡುತ್ತಿದ್ದಿರಾ? ಹೇಳುವವರು, ಕೇಳುವವರು ನಿಮಗೆ ಯಾರೂ ಇಲ್ಲ. ತಾತ್ಕಾಲಿಕ ಪರಿಹಾರವನ್ನಾದರೂ ಕೊಡಲಿಲ್ಲ, ಸ್ಪಷ್ಟಸಂದೇಶವನ್ನಾದರೂ ಕೊಡಲಿಲ್ಲ ಎಂದು ಹರಿಹಾಯ್ದರು.

Bengaluru Rains: ಸಿಎಂ ಮುಂದೆ ಮಳೆ ಸಂತ್ರಸ್ತರ ಗೋಳಾಟ: ಜನರ ಆಕ್ರೋಶ

ಮುಖ್ಯಮಂತ್ರಿಗಳು, ಸಚಿವರು ಇಲ್ಲಿನ ಸಮಸ್ಯೆಯನ್ನು ಪರಿಹಾರ ಮಾಡುವುದು ಬಿಟ್ಟು ಚಿಕ್ಕಮಗಳೂರಿಗೆ ಹೋಗಿದ್ದರು. ಹೊಗಳುವುದಕ್ಕೆ ಸರ್ಟಿಫಿಕೇಟ್‌ ಕೊಡಲು ಹೋಗಿದ್ದರಾ ಇವರು? ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಒಂದಿಷ್ಟುಕಡೆ ಹೋಗಿ ಕಾಟಚಾರಕ್ಕೆ ಸಂಚಾರ ಮಾಡುತ್ತಿದ್ದಾರೆ. ಅವರಿಗೆ ಮಳೆ ಅನಾಹುತ ಬಗೆಹರಿಸುವ ಮನಸ್ಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ನಗರದ ಹೊರಮಾವು ಪ್ರದೇಶಕ್ಕೆ ಸಚಿವರು ಹೋಗಿ ಫೆಬ್ರವರಿಗೆ ಸರಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಹಾಗಾದರೆ ಕೆ.ಆರ್‌.ಪುರ ಕ್ಷೇತ್ರಕ್ಕೆ ಕೊಟ್ಟ.800 ಕೋಟಿ ಏನಾಯಿತು? ಕೋಟ್ಯಂತರ ರೂಪಾಯಿ ಅನುದಾನ ತೆಗೆದುಕೊಂಡು ಹೋಗಿ ಏನು ಮಾಡಿದಿರಿ? ರಾಜಕಾಲುವೆ ಕಥೆ ಏನಾಯಿತು? ನಗರ ಪ್ರದಕ್ಷಿಣೆ ಹಾಕಿ ಕೇವಲ ಫೋಟೋಗೆ ಸೀಮಿತವಾಗಬಾರದು. ಹಿರಿಯ ಅಧಿಕಾರಿಗಳ ಸಭೆ ಕರೆಯಿರಿ. ಬೆಂಗಳೂರು ಕಮಿಷನರ್‌ ಅವರನ್ನು ಕರೆದು ಚರ್ಚೆ ಮಾಡಿ ಎಂದು ಸಲಹೆ ನೀಡಿದರು.

Karnataka Rains: ಕರ್ನಾಟಕದ 22 ಜಿಲ್ಲೆಗಳಲ್ಲಿ ಮಳೆಯಬ್ಬರ: 5 ಜಿಲ್ಲೆ ಶಾಲೆಗೆ ರಜೆ

ಇಂದಿನಿಂದ ಒಂದು ವಾರ ನಗರ ಪ್ರದಕ್ಷಿಣೆ

ಶುಕ್ರವಾರದಿಂದ ಒಂದು ವಾರ ನಗರದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ನೆರವಿಗೆ ಧಾವಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನು ತೋರಿಕೆಗಾಗಿ ಪ್ರದಕ್ಷಣೆ ಮಾಡಲ್ಲ. ತಡವಾದರೂ ಒಂದು ವಾರ ನಾನು ನಗರ ಪ್ರದಕ್ಷಿಣೆ ಮಾಡುತ್ತೇನೆ. ನಗರದ ಬಹುತೇಕ ಕ್ಷೇತ್ರಗಳಿಗೆ ಹೋಗುತ್ತೇನೆ. ಜೊತೆಗೆ ಒಂದಿಷ್ಟುಭಾಗಗಳಿಗೆ ಮುಖಂಡರು ಹೋಗುತ್ತಾರೆ. ನೀರು ನುಗ್ಗಿರುವ ಮನೆಗಳಿಗೆ ಪಕ್ಷದ ವತಿಯಿಂದ ತಕ್ಷಣ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನಾನು ಸಮಸ್ಯೆ ಆದ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಒಂದು ಗಂಟೆ ಅವರ ಬಳಿ ಚರ್ಚೆ ಮಾಡುತ್ತೇನೆ. ಬಡ ಕುಟುಂಬಗಳಿಗೆ ನೆರವು ನೀಡುತ್ತೇನೆ. ಯಾವ್ಯಾವ ಬಡಾವಣೆಯಲ್ಲಿ ಏನೇನು ಅನಾಹುತ ಆಗಿದೆ ಎನ್ನುವುದರ ಪಟ್ಟಿಮಾಡಲು ಹೇಳಿದ್ದೇನೆ
 

Follow Us:
Download App:
  • android
  • ios