ಹುಣಸೂರು(ನ.30): ರಾಷ್ಟ್ರೀಯ ಪಕ್ಷಗಳ ಮೇಲೆ ನಮಗೆ ನಂಬಿಕೆ ಇಲ್ಲ, ಯಾವ ಪಕ್ಷದ ಜತೆಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ. ಡಿಸೆಂಬರ್ 9ರ ನಂತರ ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರು ಹೇಳಿದ್ದಾರೆ. 

ಸರ್ಕಾರ ಉಳಿಸೋದು, ಬೀಳಿಸೋದು ಡಿ. 9ರ ನಂತರ ಹೇಳ್ತಿನಿ ಎಂದ HDK

ಶನಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರ ಜತೆಗೂ ಒಪ್ಪಂದ ಮಾಡಿಕೊಂಡಿಲ್ಲ. ಕಾಂಗ್ರೆಸ್, ಬಿಜೆಪಿ ನಡುವೆ ಒಳ ಒಪ್ಪಂದ ಆಗಿರಬಹುದು. ತುಮಕೂರಿನಲ್ಲಿ ಇಬ್ಬರೂ ಒಟ್ಟಿಗೆ ಸೇರಿಕೊಂಡುಎಚ್.ಡಿ.ದೇವೇಗೌಡ ಅವರನ್ನು ಸೋಲಿಸಿದರು. ಮಂಡ್ಯದಲ್ಲೂ ನಮ್ಮ ಅಭ್ಯರ್ಥಿ ಸೋಲಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡಿದರು ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಮ್ಮ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಹುಣಸೂರಿಗೆ 120 ಕೋಟಿ ರೂ. ಅನುದಾನ ನೀಡಿದ್ದೇನೆ.ಮೂರು ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿದ್ದೇನೆ. ಆದರೂ ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದರು.ಯಾವ ಅಭಿವೃದ್ಧಿಯೂ ಆಗಲಿಲ್ಲ, ಅವರ ಅಭಿವೃದ್ಧಿ ಆಯಿತು ಅಷ್ಟೆ ಎಂದು ಬಿಜೆಪಿ ಅಭ್ಯರ್ಥಿ ಹೆಚ್ ವಿಶ್ವನಾಥ್ ವಿರುದ್ಧ ಹರಿಹಾಯ್ದಿದ್ದಾರೆ.

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.