ಬಾಗಲಕೋಟೆ[ನ.29]: ಮಾಜಿ ಸಚಿವ ಎಚ್. ವೈ.ಮೇಟಿ  ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು[ಶುಕ್ರವಾರ] ಬೆಂಗಳೂರಿಗೆ ತೆರಳಿದ್ದಾರೆ.  ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ದಾಖಲಾಗಲು ತೆರಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಎಚ್.ವೈ.ಮೇಟಿ ಅವರು ತೀವ್ರ ಕಿಡ್ನಿ ಸ್ಟೋನ್ ನೋವಿನಿಂದ ಬಳಲುತ್ತಿದ್ದಾರೆ. ಮಾಜಿ 74 ವಷ೯ ವಯಸ್ಸಿನ ಎಚ್.ವೈ.ಮೇಟಿ ಅವರು ಕಳೆದ ಸೋಮವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾತಗಿತ್ತು.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಆದರೆ, ಆಸ್ಪತ್ರೆ ವೈದ್ಯರ ಸೂಚನೆ ಮೇರೆಗೆ ಇಂದು ಬೆಂಗಳೂರಿನ ಮನಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಲು  ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ವಿರುದ್ಧ ಪರಾಭವ ಹೊಂದಿದ್ದರು.