ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ! ಮಾಜಿ ಸಚಿವ ಜನಾರ್ಧನ ರೆಡ್ಡಿ ಭರವಸೆ! ಶ್ರೀರಾಮುಲುಗೆ ಉನ್ನತ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದ ರೆಡ್ಡಿ! ಬಿಜೆಪಿಗೆ ಜನ ಆರ್ಶೀವಾದದ ಅಗತ್ಯ ಇದೆ ಎಂದ ಜನಾರ್ಧನ ರೆಡ್ಡಿ
ಗದಗ(ಸೆ.1): ರಾಜ್ಯ ರಾಜಕಾರಣದಲ್ಲಿ ಶೀರ್ಘ ಬದಲಾವಣೆಯಾಗಲಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಜನರ್ಧನ ರೆಡ್ಡಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಉನ್ನತ ಮಟ್ಟದ ಸ್ಥಾನಮಾನ ಸಿಗಲಿದೆ ಎಂದು ಭವಿಷ್ಯ ನುಡಿದರು.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳವಣಕಿ ಗ್ರಾಮಕ್ಕೆ ಆಗಮಿಸಿದ್ದ ರೆಡ್ಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಕಾಲ ಸನ್ನಿಹಿತವಾಗಿದ್ದು, ಇದಕ್ಕೆ ಜನರ ಆರ್ಶೀವಾದ ಬೇಕಾಗಿದೆ ಎಂದು ಹೇಳಿದರು.
