ನೀರು ಹಂಚಿಕೆ ಕುರಿತು ಸರ್ವಪಕ್ಷ ಸಭೆ ಕರೆಯಿರಿ: ಬಿಎಸ್‌ವೈಗೆ ಎಂ.ಬಿ.ಪಾಟೀಲ್ ಪತ್ರ
ರಾಜ್ಯದ ಹಿತ ಕಾಯುವಂತೆ ಎಂಬಿಪಾ ಒತ್ತಾಯ| ಕೃಷ್ಣಾ ನೀರಿನ ಮರು ಹಂಚಿಕೆ ಕುರಿತು ಹೊಸ ನ್ಯಾಯಾಧಿಕರಣ ರಚನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕುರಿತು ನೀಡಿದ ಹೇಳಿಕೆ ಗೊಂದಲಮಯ|
ವಿಜಯಪುರ(ಅ.09): ಆಂಧ್ರಪ್ರದೇಶ ಹಾಗೂ ತೆಲಂಗಾಣ ನೀರು ಹಂಚಿಕೆ ಕುರಿತು ಹೊಸದಾಗಿ ಕೃಷ್ಣಾ ನ್ಯಾಯಾಧಿಕರಣ ರಚನೆ ಕುರಿತು ಕೇಂದ್ರ ಜಲಶಕ್ತಿ ಸಚಿವರು ಸಭೆ ಕರೆದ ಹಿನ್ನೆಲೆಯಲ್ಲಿ ರಾಜ್ಯದ ಹಿತ ಕಾಯಲು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಅವರು ಸಿಎಂಗೆ ಪತ್ರ ಬರೆದಿದ್ದಾರೆ.
ಕೃಷ್ಣಾ ನೀರಿನ ಮರು ಹಂಚಿಕೆ ಕುರಿತು ಹೊಸ ನ್ಯಾಯಾಧಿಕರಣ ರಚನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕುರಿತು ನೀಡಿದ ಹೇಳಿಕೆ ಗೊಂದಲಮಯವಾಗಿದೆ. ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ಕುರಿತು ತಮಗೆ ಅನ್ಯಾಯವಾಗಿದೆ ಎಂದು ರಾಜ್ಯಗಳ ವಿಭಜನೆ ನಂತರ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳು ಪರಸ್ಪರ ಸುಪ್ರೀಂ ಕೋರ್ಟ್ ಹಾಗೂ ನ್ಯಾಯಾಧಿಕರಣದಲ್ಲಿ ದಾವೆ ಹೂಡಿವೆ. ನ್ಯಾಯಾಧಿಕರಣ ಇದು ಆ ಎರಡು ರಾಜ್ಯಗಳ ನಡುವಿನ ಆಂತರಿಕ ವ್ಯಾಜ್ಯವಾಗಿದೆ ಎಂದು ತೀರ್ಪುನೀಡಿದೆ. ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಇದೇ ನಿಲುವನ್ನು ಅಫಿಡವಿಟ್‌ನಲ್ಲಿ ಸಲ್ಲಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ವಿಜಯಪುರದ ಬಳಿ ಭೀಕರ ಅಪಘಾತ: ಅಂಜನಾದ್ರಿ ಬೆಟ್ಟಕ್ಕೆ ಹೊರಟ್ಟಿದ್ದ ಮೂವರು ಭಕ್ತರ ದುರ್ಮರಣ
ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರಿನ ಮರು ಹಂಚಿಕೆ ಆ ಎರಡೂ ರಾಜ್ಯಗಳಿಗೆ ಸೀಮಿತವಾಗಿದೆ ಹೊರತು ಕರ್ನಾಟಕಕ್ಕೆ ಅಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ. ಆದರೆ, ಸಭೆ ಕರ್ನಾಟಕ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಖ್ಯಮಂತ್ರಿಗಳು ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.