ಗೋಕಾಕ್‌ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರು ಇದೀಗ ಸಂಪೂರ್ಣವಾಗಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕೆಲ ದಿನಗಳ ಕಾಲ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. 

ಬೆಳಗಾವಿ (ಏ.20): ಕೊರೋನಾ ಸೋಂಕು ದೃಢಪಟ್ಟಿದ್ದ ಗೋಕಾಕ್‌ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 

ಅವರ ಕೋವಿಡ್‌ ವರದಿ ನೆಗೆಟಿವ್‌ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಕೆಲ ದಿನಗಳ ಕಾಲ ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೋಕಾಕ್‌ ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್‌, ರಮೇಶ್‌ ಜಾರಕಿಹೊಳಿ ಅವರ ಕೋವಿಡ್‌ ವರದಿ ನಾಲ್ಕು ದಿನಗಳ ಹಿಂದೆಯೇ ಬಂದಿದ್ದು, ವರದಿ ನೆಗೆಟಿವ್‌ ಬಂದಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವೈದ್ಯರ ಸಲಹೆ ಮೇರೆಗೆ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಸಲೀಲೆ ಸಿಡಿ ಪ್ರಕರಣ: ರಮೇಶ್‌ ಜಾರಕಿಹೊಳಿಗೆ ಮತ್ತೊಂದು ನೋಟಿಸ್‌ .

ರಮೇಶ್‌ ಜಾರಕಿಹೊಳಿ ಅವರಿಗೆ ಏ.1ರಂದು ಕೋವಿಡ್‌ ವರದಿ ಪಾಸಿಟಿವ್‌ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೋಕಾಕ್‌ ತಾಲೂಕು ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ಮನೆಯಲ್ಲೇ ಹೋಂ ಕ್ವಾರಂಟೈನ್‌ ಆಗಿದ್ದರು.

ವಿಚಾರಣೆಗೆ ಹಾಜರ್‌ ಆಗೋದು ಡೌಟು: ಸೀಡಿ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಗೋಕಾಕಕ್ಕೆ ಆಗಮಿಸಿ, ಏ.20 ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ನೋಟಿಸ್‌ ನೀಡಿದ್ದಾರೆ. ಆದರೆ, ಅವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ