ರಾಮದುರ್ಗ(ಏ.16): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರದ ಬಿಜೆಪಿ ನಾಯಕರಿಗೆ ಬೇಡವಾದ ಕೂಸು. ಹೀಗಾಗಿ ಕೇಂದ್ರದಿಂದ ಬರಬೇಕಾದ ಅನುದಾನ ರಾಜ್ಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಮಾಜಿ ಸಚಿವ ಆರ್‌.ಬಿ.ತಿಮ್ಮಾಪುರ ಆರೋಪಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರವು ರಾಜ್ಯದ ಜಿಎಸ್‌ಟಿ ಪಾಲು, ಅನುದಾನವನ್ನು ಸರಿಯಾಗಿ ನೀಡಿಲ್ಲ. ರಾಜ್ಯದಲ್ಲಿ ಉಂಟಾದ ನೆರೆಯಿಂದಾದ ಹಾನಿಗೂ ಸರಿಯಾಗಿ ಪರಿಹಾರ ನೀಡಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣದಲ್ಲಿ ವಿಫಲಗೊಂಡಿದೆ. ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಹಿಂದುಳಿದ ನಾಯಕರಿಗೆ ಸರಿಯಾದ ಸ್ಥಾನಮಾನ ನೀಡುತ್ತಿಲ್ಲ ಎಂದರು.

ಬೆಳಗಾವಿ ಬೈಎಲೆಕ್ಷನ್‌: 'ಸೋಲಿನ ಭೀತಿಯಿಂದ ಸಿಎಂ ಪ್ರಚಾರಕ್ಕೆ ಬಂದಿದ್ದಾರೆ'

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಜನಪರ ಕಾರ್ಯಗಳನ್ನು ಮುಂದಿಟ್ಟುಕೊಂಡು ನಾವುಮತ ಕೇಳುತ್ತಿದ್ದೇವೆ. ಬಿಜೆಪಿಯವರು ಮಂಗಲ ಅಂಗಡಿ ಪರ ಅನುಕಂಪದ ಅಲೆಯಿಂದ ಲಾಭ ಆಗಬಹುದು ಎಂಬ ಭ್ರಮೆಯಲ್ಲಿದ್ದಾರೆ ಎಂದು ತಿಮ್ಮಾಪುರ ತಿಳಿಸಿದ್ದಾರೆ.