ಬೆಂಗಳೂರು(ಡಿ.16): ಗುಂಡೂರಾವ್‌ ಸರ್ಕಾರದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್‌(78) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದರು. ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು(ಬುಧವಾರ) ಚಿಕ್ಕಬಳ್ಳಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರೇನುಕಾ ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನ ಅಗಲಿದ್ದಾರೆ. 1989ರಲ್ಲಿ ಮೂರನೇ ಬಾರಿಗೆ ಚಿಕ್ಕಬಳ್ಳಾಪುರ ಮೀಸಲು ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿ ಮುಖ್ಯಮಂತ್ರಿಯಾಗಿದ್ದ ಗುಂಡೂರಾವ್‌ ಸರ್ಕಾರದಲ್ಲಿ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿದ್ದರು.

32 ವರ್ಷ ನಂತ್ರ ಚಿಕ್ಕಬಳ್ಳಾಪುರಕ್ಕೆ ಒಲಿದ ಸಚಿವ ಸ್ಥಾನ

ಆಂಜನೇಯ ಸಂತಾಪ:

‘ಕುಟುಂಬಕ್ಕೆ ರೇಣುಕಾ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯಲ್ಲಿ ದೇವರು ನೀಡಲಿ’ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.