ಮೃತ ಶ್ರೀರಂಗದೇವರಾಯಲು ಅವರು 5 ಬಾರಿ ಶಾಸಕರಾಗಿದ್ದರು. ಮೂರು ಬಾರಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎರಡು ಬಾರಿ ಗಂಗಾವತಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 

ಗಂಗಾವತಿ(ಆ.22): ಮಾಜಿ ಸಚಿವ, ರಾಜವಂಶಸ್ಥ ಶ್ರೀರಂಗದೇವರಾಯಲು(86) ಇಂದು(ಮಂಗಳವಾರ) ನಿಧನರಾಗಿದ್ದಾರೆ. ಶ್ರೀರಂಗದೇವರಾಯಲು ಅವರು ವಯೋಸಹಜದಿಂದಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. 

ಮೃತ ಶ್ರೀರಂಗದೇವರಾಯಲು ಅವರು 5 ಬಾರಿ ಶಾಸಕರಾಗಿದ್ದರು. ಮೂರು ಬಾರಿ ಕೊಪ್ಪಳ ಜಿಲ್ಲೆಯ ಕನಕಗಿರಿ ಎರಡು ಬಾರಿ ಗಂಗಾವತಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 

ಸ್ಪಂದನಾ ವಿಜಯ್‌ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

ವೀರಪ್ಪ ಮೋಯ್ಲಿ ಮುಖ್ಯಮಂತ್ರಿ ಸಂಪುಟದಲ್ಲಿ ಶ್ರೀರಂಗದೇವರಾಯಲು ಕಾಡಾ ಅಧ್ಯಕ್ಷರಾಗಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಖಾದಿ ಗ್ರಾಮೋದ್ದೋಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 
ರಾಜವಂಶಸ್ಥೆ ಲಲಿತರಾಣಿ ಅವರ ಪತಿ ಶ್ರೀರಂಗದೇವರಾಯಲು. ಮೃತರ ಅಂತ್ಯ ನಾಳೆ(ಬುಧವಾರ) ನಡೆಯಲಿದೆ ಅಂತ ತಿಳಿದು ಬಂದಿದೆ.