ಮೈಸೂರು(ಫೆ.24): ನಾನು ಈಗ ಆರೋಗ್ಯವಾಗಿದ್ದೇನೆ. ಧ್ವನಿ ಪೆಟ್ಟಿಗೆ ಮಾತ್ರ ಹಂತಹಂತವಾಗಿ ಸರಿಯಾಗುತ್ತಿದೆ. ಧ್ವನಿ ಸರಿಯಾಗಲು ಥೆರಪಿ  ನಡೆಯುತ್ತಿದೆ. ಅದನ್ನು ಹೊರತುಪಡಿಸಿ ನಾನು ಫುಲ್ ಆರಾಮವಾಗಿದ್ದೇನೆ. ಮೊದಲಿಗೆ ಹೊಲಿಸಿದರೆ ಇದೀಗ ಫೈನ್ ಮತ್ತು ಧ್ವನಿ ಸುಧಾರಿಸಿದೆ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ತಮ್ಮ ಮೇಲೆ ಕೊಲೆ ಯತ್ನದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇನ್ಮುಂದೆ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ಮಾರ್ಚ್ 2ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲೂ ಪಾಲ್ಗೊಳ್ಳುತ್ತೇನೆ.

ಶಾಸಕ ತನ್ವೀರ್ ಸೇಠ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಯುವಕನೊಬ್ಬ ಮಟನ್ ಕತ್ತರಿಸುವ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ನನ್ನ ಮೇಲೆ ನಡೆದ ಹಲ್ಲೆ ಪ್ರಕರಣ ಅನಿರೀಕ್ಷಿತವಾದ ಘಟನೆಯಾಗಿದೆ. ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರ ಪ್ರತಿಯನ್ನು ಪಡೆದುಕೊಂಡಿದ್ದೇನೆ. ತನಿಖೆ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರು ಯಾರು ಎಂಬುದು ಗೊತ್ತಿಲ್ಲ.ಇದೆಲ್ಲವೂ ಸಾರ್ವಜನಿಕವಾಗಿ ಬಹಿರಂಗವಾಗಬೇಕು. ಇದನ್ನು ಪೊಲೀಸರು ಜನರಿಗೆ ತಿಳಿಸಬೇಕು. ನನಗೆ ಪೊಲೀಸರು 24 ಗಂಟೆ ಭದ್ರತೆ ನೀಡಲು ಸಾಧ್ಯವಿಲ್ಲ. ಸಾವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ.ಒಳ್ಳೆಯ ಸಾವು ಬರಲಿ ಅಂತ ಕಾಯುತ್ತೇನೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ನವೆಂಬರ್ 17 ರಂದು ಮೈಸೂರಿನಲ್ಲಿ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಮಟನ್ ಕತ್ತರಿಸುವ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ತೀವ್ರ ಗಾಯಗೊಂಡಿರುವ ಶಾಸಕರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

'ತನ್ವೀರ್‌ ಸೇಠ್‌ನಿಂದ ಯಾವುದೇ ಅನುಕೂಲ‌ ಆಗ್ತಿಲ್ಲ, ಅದಕ್ಕೆ ಕೊಲೆ ಯತ್ನ'..!

ತನ್ವೀರ್ ಸೇಠ್ ರಾತ್ರಿ ಸಂಬಂಧಿಕರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರು ನಗರದ ಬನ್ನಿಮಂಟಪ ಸಮೀಪದ ಪಾರ್ಟಿ ಹಾಲ್‌ಗೆ ತೆರಳಿದ್ದರು. ಸುಮಾರು ರಾತ್ರಿ 11.30 ರ ವೇಳೆಗೆ ಫರಾನ್ ಪಾಶಾ (25) ಎಂಬ ವ್ಯಕ್ತಿ ಏಕಾಏಕಿ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದನು.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್‌

"