ಬೆಳಗಾವಿ(ಜ.02): ಉತ್ತರ ಕರ್ನಾಟಕಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ತೋರಿದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗು ಏಳಲು ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಹಾಗೂ ಕಚೇರಿಗಳನ್ನು ಸ್ಥಳಾಂತರ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಉದಾಸೀನ ಭಾವನೆ ತೋರಿದ್ದರಿಂದ ಪ್ರತ್ಯೇಕತೆ ಕೂಗು ಮೊಳಗುತ್ತಿವೆ. ಆದ್ದರಿಂದ ಉಭಯ ಸರ್ಕಾರಗಳು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು. ಅಲ್ಲದೆ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮೂಲಕ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಲ್ಲಿ ಈ ಭಾಗದ ಜನರಿಗೆ ಸಂದೇಶ ನೀಡಿದಂತಾಗುತ್ತದೆ ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇನ್ನೂ ಬೆಳಗಾವಿ ಎಂದೆಂದಿಗೂ ಕರ್ನಾಟಕದ್ದೆ ಶಿವಸೇನೆ ಹಾಗೂ ಎಂಇಎಸ್ ಏನೆ ಹೇಳಿದರು ಅವರದ್ದಾಗಲು ಸಾಧ್ಯವಿಲ್ಲ. ಅವರು ಬೆಳಗಾವಿ ಸಮೀಪ ಬರಲಿ, ಮಹಾಜನ್ ವರದಿಯಲ್ಲಿ ತಿಳಿಸಿ ಗೆರೆ ಕೊರೆಯಲಾಗಿದೆ. ಪಾಲಿಕೆ ಚುನಾವಣೆಗಾಗಿ ರಾಜಕೀಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಲಿ, ಬೆಳಗಾವಿ ಸಮೀಪ ಬಂದರೆ ಕೊಲ್ಲಾಪುರ ಹಾಗು ಸೊಲ್ಲಾಪುರ ನಮ್ಮವು ಎಂದು ಎಂಇಎಸ್ ಹಾಗೂ ಶಿವಸೇನೆ ಪುಂಡರಿಗೆ ಸೆಡ್ಡು ಹೊಡೆದಿದ್ದಾರೆ.