ಬೆಳೆ ವಿಮೆ ಬಿಡುಗಡೆಗೆ ಮಾಜಿ ಶಾಸಕ ರಾಜೇಶ್ ಗೌಡ ಒತ್ತಾಯ
ಮಳೆಯ ವೈಫಲ್ಯತೆಯಿಂದ ಬಳಲುತ್ತಿರುವ ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದು, 35ರಿಂದ ಶೇ.40ರಷ್ಟು ಅಡಿಕೆ, ಪಪ್ಪಾಯಿ, ದಾಳಿಂಬೆ, ಮಾವು ಮತ್ತು ತೆಂಗು ಬೆಳೆಗಳಲ್ಲಿ ಈ ವರ್ಷ ಇಳುವರಿ ಕುಸಿತವಾಗಿದೆ. ರೈತರಿಗೆ ಶೀಘ್ರ ತೋಟಗಾರಿಕಾ ಬೆಳೆ ವಿಮೆ ಬಿಡುಗಡೆ ಮಾಡಬೇಕೆಂದು ಮಾಜಿ ಶಾಸಕ ಡಾ. ಸಿ.ಎಂ.ರಾಜೇಶ್ ಗೌಡ ಒತ್ತಾಯಿಸಿದರು.
ಶಿರಾ : ಮಳೆಯ ವೈಫಲ್ಯತೆಯಿಂದ ಬಳಲುತ್ತಿರುವ ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದು, 35ರಿಂದ ಶೇ.40ರಷ್ಟು ಅಡಿಕೆ, ಪಪ್ಪಾಯಿ, ದಾಳಿಂಬೆ, ಮಾವು ಮತ್ತು ತೆಂಗು ಬೆಳೆಗಳಲ್ಲಿ ಈ ವರ್ಷ ಇಳುವರಿ ಕುಸಿತವಾಗಿದೆ. ರೈತರಿಗೆ ಶೀಘ್ರ ತೋಟಗಾರಿಕಾ ಬೆಳೆ ವಿಮೆ ಬಿಡುಗಡೆ ಮಾಡಬೇಕೆಂದು ಮಾಜಿ ಶಾಸಕ ಡಾ. ಸಿ.ಎಂ.ರಾಜೇಶ್ ಗೌಡ ಒತ್ತಾಯಿಸಿದರು.
ರೈತರಿಗೆ ತೋಟಗಾರಿಕೆ ಬೆಳೆ ವಿಮೆ ಬಿಡುಗಡೆ ಮಾಡುವ ಬಗ್ಗೆ ಬೆಂಗಳೂರು ನೃಪತುಂಗ ರಸ್ತೆಯಲ್ಲಿರುವ ಕೃಷಿ ತೋಟಗಾರಿಕೆ ಭವನದ ವಿಮೆ ವಿಭಾಗಕ್ಕೆ ಭೇಟಿ ನೀಡಿ, ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಅವರೊಂದಿಗೆ ಚರ್ಚಿಸಿ ಶಿರಾ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ರೈತರು ಅನುಭವಿಸಿದ ನಷ್ಟದ ಬಗ್ಗೆ ವಿವರಣೆ ನೀಡಿ, ಮನವಿ ಸಲ್ಲಿಸಿದ್ದೇನೆ. ಇದಕ್ಕೆ ಸಕಾರಾತ್ಮಕ ಸ್ಪಂದಿಸಿದ ವಿಮೆ ಅಧಿಕಾರಿಗಳು ಈ ತಿಂಗಳ ಅಂತ್ಯದೊಳಗೆ ದಾಖಲಾತಿ ಪರಿಶೀಲನೆ ಹಾಗೂ ವರದಿ ಆಧಾರ ಮೇಲೆ ಶೀಘ್ರ ವಿಮೆ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದ ಅವರು ಕಳೆದ ಎರಡು ಆರ್ಥಿಕ ವರ್ಷದಲ್ಲಿಯೂ ವಿಮಾ ಕಚೇರಿಗೆ ಭೇಟಿ ನೀಡಿದ್ದು, ಈ ವರ್ಷವೂ ರೈತರ ಕೋರಿಕೆ ಮೇರೆಗೆ ರೈತರ ಪರವಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ವಿಶೇಷವಾಗಿ ಬೆಳೆ ನಷ್ಟ ಹಾಗೂ ಮಳೆ ಅಭಾವದ ಹಿನ್ನೆಲೆ ಉದಾರವಾಗಿ ವಿಮೆ ಹಣ ರೈತರಿಗೆ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.
ಬೆಳೆ ವಿಮೆ ತೊಡಕು ನಿವಾರಣೆಗೆ ಕ್ರಮ
ಚಿಕ್ಕಬಳ್ಳಾಪುರ (ಆ.09): ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಹಾಗೂ ಸರ್ಕಾರದಿಂದ ಬರುವ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಜನರಿಗೆ ಸಮಸ್ಯೆ ಆಗದ ರೀತಿ ಆಡಳಿತ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜೂನ್-2023ರ ಮಾಹೆ ವರೆಗಿನ ಪರಿಶೀಲನೆಯನ್ನು ಇಲಾಖಾವಾರು ನಡೆಸಿ ಮಾತನಾಡಿದರು.
ವಿಮಾ ಪರಿಹಾರ ತೊಡಕು ಪರಿಹರಿಸಿ: ಇತ್ತೀಚಿನ ಮಾಹೆಗಳಲ್ಲಿ ಹಾನಿಗೊಳಗಾದ ರೈತರಿಗೆ ವಿಮಾ ಪರಿಹಾರ ಸಂದಾಯ ಕಾರ್ಯ ಪ್ರಗತಿಯಲ್ಲಿದೆ. ಬೆಳೆ ವಿಮೆ ಪರಿಹಾರ ನೀಡುವಲ್ಲಿ ಇರುವ ತೊಡಕುಗಳನ್ನು ನಿವಾರಿಸಲು ಸೂಕ್ತ ಕ್ರಮವಹಿಸಬೇಕು. ವಿಮಾ ಕಂಪನಿಗಳು ಜಿಲ್ಲೆಯಲ್ಲಿ ಕಚೇರಿ ತೆರೆದು ಅಧಿಕಾರಿಗಳು ಮತ್ತು ರೈತರ ನಿರಂತರ ಸಂಪರ್ಕದಲ್ಲಿದ್ದು, ಸಂತ್ರಸ್ತ ರೈತರಿಗೆ ತುರ್ತು ಪರಿಹಾರ ಒದಗಿಸಬೇಕು. ಬೆಳೆ ನಷ್ಟ ಆದಾಗ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ಲೆಕ್ಕಹಾಕುವಲ್ಲಿ ಇರುವ ತಾಂತ್ರಿಕ ತೊಡಕುಗಳನ್ನು ಪ್ರಮುಖವಾಗಿ ನಿವಾರಿಸಬೇಕು ಎಂದು ಸೂಚನೆ ನೀಡಿದರು.
ಎಸ್ಸಿ-ಎಸ್ಟಿ ಕಾಯ್ದೆಯಡಿ ಸುಳ್ಳು ಕೇಸು: ಹೈಕೋರ್ಟ್ ಕಿಡಿ
ಟೊಮೆಟೋ ರೋಗಕ್ಕೆ ಬಂದಿರುವ ಬಿಳಿ ನೊಣ ರೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಈಗಾಗಲೇ ತಿಳಿಸಲಾಗಿತ್ತು. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಜೊತೆಗೆ ನರ್ಸರಿ ಫಾರಂಗಳಲ್ಲಿ ಸಸಿ ವಿತರಕರಿಗೆ, ಬೀಜ ಪೂರೈಕೆದಾರರಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ಈ ಕುರಿತು ಕೇಂದ್ರ ಅಧ್ಯಯನ ತಂಡಕ್ಕೂ ಮಾಹಿತಿ ನೀಡಲಾಗಿದೆ. ಅವರಿಂದ ಪರಿಹಾರ ಕ್ರಮಗಳನ್ನು ನೀರಿಕ್ಷಿಸಿ, ಸ್ಥಳೀಯವಾಗಿ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಆ ಎಲ್ಲಾ ಕ್ರಮ ಜರುಗಿಸುವ ಮೂಲಕ ರೈತರಿಗೆ ನೆರವಾಗಬೇಕೆಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.