ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡ್ಕೊಳ್ಳಿ: ಹುನಗುಂದ ಮಾಜಿ ಶಾಸಕ ಕಾಶಪ್ಪನವರ
ಜ್ವರ, ಕೆಮ್ಮು, ಶೀತ ಇದ್ದ ಕಾರಣ ಕೋವಿಡ್ ಪರೀಕ್ಷೆಗೆ ಒಳಗಾದ ನಂತರ ವಿಜಯಾನಂದ ಕಾಶಪ್ಪನವರಗೆ ಪಾಸಿಟಿವ್ ಬಂದಿತ್ತು| ಬಾಗಲಕೋಟೆಯ ಕುಮಾರೇಶ್ವರ ಕೋವಿಡ್ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕಾಶಪ್ಪನವರ| ಮಾಜಿ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೂ ಕೊರೋನಾ ದೃಢ|
ಬಾಗಲಕೋಟೆ(ಆ.07): ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಚೇತರಿಸಿಕೊಳ್ಳುತ್ತಿದ್ದು, ತಮ್ಮ ಸಂಪರ್ಕಕ್ಕೆ ಬಂದವರಿಗೆ ಸರ್ಕಾರಿ ಆಸ್ಪತ್ರೆಗೆ ಹೋಗಿ ಪರೀಕ್ಷಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ.
ಜ್ವರ, ಕೆಮ್ಮು, ಶೀತ ಇದ್ದ ಕಾರಣ ಕೋವಿಡ್ ಪರೀಕ್ಷೆಗೆ ಒಳಗಾದ ನಂತರ ಪಾಜಿಟಿವ್ ಬಂದಿತ್ತು. ಹೀಗಾಗಿ ಬಾಗಲಕೋಟೆಯ ಕುಮಾರೇಶ್ವರ ಕೋವಿಡ್ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೊರೋನಾಕ್ಕೆ ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ. ಜಾಗೃತಿ ವಹಿಸಿ ಹಾಗೂ ನನ್ನ ಸಂಪರ್ಕದಲ್ಲಿದ್ದ ಸ್ನೇಹಿತರು, ಸಾರ್ವಜನಿಕರು ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಗುಣಮುಖರಾಗಲು 5 ವರ್ಷದ ಬಾಲಕಿಯಿಂದ ವಿಶೇಷ ಪೂಜೆ!
ಇನ್ನು ವಿಜಯಾನಂದ ಕಾಶಪ್ಪನವರ ಅವರ ಪತ್ನಿ ಮಾಜಿ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೂ ಕೊರೋನಾ ದೃಢಪಟ್ಟಿದೆ.ಆ.4 ರಂದು ಪತಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವರಿಗೆ ಕೊರೋನಾ ದೃಢಪಟ್ಟಿತ್ತು. ಗುರುವಾರ ವೀಣಾ ಕಾಶಪ್ಪನವರಿಗೆ ದೃಢಪಟ್ಟಿದೆ. ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಇವರನ್ನ ದಾಖಲು ಮಾಡಲಾಗಿದೆ.