ಮೈಸೂರು, ಸುತ್ತೂರಿಗೆ ಭೇಟಿ ನೀಡಿದ್ದ ಮನಮೋಹನ್ ಸಿಂಗ್!
ಸತತ 10 ವರ್ಷ ಪ್ರಧಾನಿಯಾಗಿದ್ದ ಡಾ.ಸಿಂಗ್ ಅವರು 2005 ರ ಫೆ.12 ರಂದು ಮೈಸೂರಿನ ಹೆಬ್ಬಾಳಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಉದ್ಘಾಟಿಸಿದ್ದರು. ಅಂದಿನ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎನ್. ಧರಂಸಿಂಗ್, ಉಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಯೋಜನೆ ಆಯೋಗದ ಉಪಾಧ್ಯಕ್ಷರಾಗಿದ್ದ ಮಾಂಟೆಸಿಂಗ್ ಅಹ್ಲುವಾಲಿಯಾ ಕೂಡ ಭಾಗಿಯಾಗಿದ್ದರು.
ಅಂಶಿ ಪ್ರಸನ್ನಕುಮಾರ್
ಮೈಸೂರು(ಡಿ.28): ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. ಇನ್ಫೋಸಿಸ್ ಕ್ಯಾಂಪಸ್ ಹಾಗೂ ಶ್ರೀ ಸುತ್ತೂರು ಕ್ಷೇತ್ರದಲ್ಲಿ ದಾಸೋಹ ಭವನ ಉದ್ಘಾಟಿಸಿದ್ದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಖ್ಯಾತ ಆರ್ಥಿಕತಜ್ಞ ಪ್ರೊ. ಎಂ. ಮಾದಯ್ಯ ಅವರ ಆಪ್ತರಾಗಿದ್ದರು. ದೆಹಲಿಗೆ ಹೋದಾಗ ಭೇಟಿಯಾಗುತ್ತಿದ್ದರು. ಅಲ್ಲದೇ ಫೋನ್‌ನಲ್ಲಿ ಕೂಡ ಸಂಪರ್ಕ ಇತ್ತು. ಮಾದಯ್ಯ ಅವರು 1991 ರಿಂದ 1997 ರವರೆಗೆ ಮೂರು ವರ್ಷಗಳ ಎರಡು ಅವಧಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು. ಇದೇ ಅವಧಿಯಲ್ಲಿ ಡಾ.ಸಿಂಗ್ ಅವರು ಮೈವಿವಿ ಘಟಿಕೋತ್ಸವದಲ್ಲಿ ಕೂಡ ಭಾಗವಹಿಸಿದ್ದರು. ಆದರೆ ಆಗ ಅವರಿನ್ನೂ ಪ್ರಧಾನಿಯಾಗಿರಲಿಲ್ಲ. ಯೋಜನಾ ಆಯೋಗದ ಉಪಾಧ್ಯಕ್ಷರಾಗಿದ್ದರು.
ಅಸ್ಸಾಂನಿಂದ ರಾಜ್ಯಸಭಾ ಸದಸ್ಯರಾಗಿದ್ದ ಸಮಯದಲ್ಲಿ ಮಾಜಿ ಸಿಎಂ ಸೈಕಿಯಾ ಮನೆಯಲ್ಲಿ ಬಾಡಿಗೆಗಿದ್ದ ಸಿಂಗ್
22.5.2004 ರಿಂದ 23.5.2014 ಸತತ 10 ವರ್ಷ ಪ್ರಧಾನಿಯಾಗಿದ್ದ ಡಾ.ಸಿಂಗ್ ಅವರು 2005 ರ ಫೆ.12 ರಂದು ಮೈಸೂರಿನ ಹೆಬ್ಬಾಳಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಉದ್ಘಾಟಿಸಿದ್ದರು. ಅಂದಿನ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎನ್. ಧರಂಸಿಂಗ್, ಉಪ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಯೋಜನೆ ಆಯೋಗದ ಉಪಾಧ್ಯಕ್ಷರಾಗಿದ್ದ ಮಾಂಟೆಸಿಂಗ್ ಅಹ್ಲುವಾಲಿಯಾ ಕೂಡ ಭಾಗಿಯಾಗಿದ್ದರು.
ಅಂದು ಡಾ.ಸಿಂಗ್ ಅವರು ರಾಜಕಾರಣಿಯಂತೆ ಮಾತನಾಡಲಿಲ್ಲ. ಬದಲಿಗೆ ಅತ್ಯಂತ ಮೆಲು ಧ್ವನಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ, ಜಿಡಿಪಿ ಹೆಚ್ಚಳ, ಯುವಕರಿಗೆ ಉದ್ಯೋಗವಕಾಶಗಳು ಮತ್ತಿತರ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದರು. ಅದೇ ದಿನ ಶ್ರೀ ಸುತ್ತೂರು ಕ್ಷೇತ್ರಕ್ಕೆ ಭೇಟಿ ನೀಡಿ ದಾಸೋಹ ಭವನ ಉದ್ಘಾಟಿಸಿದ್ದರು.
ಜೆಎಸ್‌ಎಸ್ ದಂತ ವೈದ್ಯಕೀಯ ಕಾಲೇಜಿನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ನೆರವೇರಿಸಿದ್ದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಸಿದ್ದಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ, ಆದಿಚುಂಚನಗಿರಿ ಬಾಲಗಂಗಾಧರನಾಥಸ್ವಾಮೀಜಿ, ಮುಖ್ಯಮಂತ್ರಿ ಎನ್. ಧರಂಸಿಂಗ್, ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಎಚ್.ಎಸ್. ಮಹದೇವಪ್ರಸಾದ್ ಮೊದಲಾದವರು ಕೂಡ ಭಾಗಿಯಾಗಿದ್ದರು.
ಸಾವಿನಲ್ಲಿ ಅಜಾತಶತ್ರುವಾದ ಮನಮೋಹನ ಸಿಂಗ್!
ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹೇಶ್ ಶ್ರದ್ಧಾಂಜಲಿ
ಜಾಗತಿಕ ಭಾರತದ ಸರ್ವಶ್ರೇಷ್ಠ ವಿತ್ತ ಸಚಿವ, 14 ನೇ ಪ್ರಧಾನಮಂತ್ರಿಗಳಾಗಿದ್ದ. ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆ. ಮಹೇಶ್ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಆಹಾರ ಭದ್ರತಾ ಕಾಯ್ದೆ, ನರೇಗಾ ಯೋಜನೆ, ಆರ್ ಟಿಇ, ಆರ್ ಟಿಐ ಸೇರಿದಂತೆ ಅನೇಕ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿವೆ. ದೇಶದ ಬಡವರು ನೀರುದ್ಯೋಗಿಗಳ ಪರವಾಗಿ ಅವರು ಕೆಲಸ ಮಾಡಿದ್ದಾರೆ. ಸರಳ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಮನಮೋಹನ ಸಿಂಗ್ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಮಾಜಿ ಪ್ರಧಾನಿಗೆ ಭಾವಪೂರ್ಣ ನಮನ
ಮೈಸೂರು: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞ, ಮಹಮೇಧಾವಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನಗಳನ್ನು ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ ಸೂಚಿಸಿದ್ದಾರೆ. ದೇಶದ ಆರ್ಥಿಕತೆಗೆ ಮನಮೋಹನ ಸಿಂಗ್ ಅವರು ನೀಡಿದ ಕೊಡುಗೆ ಅಪಾರ. ಹಲವಾರು ಶಾಸನಬದ್ಧ ಕಾರ್ಯಕ್ರಮಗಳ ಮೂಲಕ ಅವರು ದೇಶದ ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ನಷ್ಟವಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.