Asianet Suvarna News Asianet Suvarna News

ಬೆಂಗಳೂರು: ಕಬ್ಬನ್‌ ಪಾರ್ಕ್‌ನಲ್ಲಿ ಹಾಪ್‌ಕಾಮ್ಸ್‌ ಇದೆಯೇ?, ಪತ್ತೆಗೆ ಸಮಿತಿ ರಚನೆ

ಹಡ್ಸನ್‌ ವೃತ್ತ ಬಳಿಯಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಟ್ಟಡ ಕಬ್ಬನ್‌ ಪಾರ್ಕ್ ವ್ಯಾಪ್ತಿಯಲ್ಲಿದೆಯೇ ಎಂಬ ಬಗ್ಗೆ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್‌ ಹಾಗೂ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರು ಜಂಟಿಯಾಗಿ ಫೆ.4ರಂದು ಸಮೀಕ್ಷೆ ನಡೆಸಬೇಕು: ಹೈಕೋರ್ಟ್‌ ನಿರ್ದೇಶನ. 

Forming Committee to Find Hopcoms at Cubbon Park in Bengaluru grg
Author
First Published Jan 26, 2023, 11:36 AM IST

ಬೆಂಗಳೂರು(ಜ.26):  ನಗರದ ಹಡ್ಸನ್‌ ವೃತ್ತದ ಬಳಿಯಿರುವ ಹಾಪ್‌ಕಾಮ್ಸ್‌ ಕಟ್ಟಡ (ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಟ್ಟಡ) ಕಬ್ಬನ್‌ ಪಾರ್ಕ್ ವ್ಯಾಪ್ತಿಯಲ್ಲಿದೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಫೆ.8ರಂದು ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಕಬ್ಬನ್‌ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್‌.ಉಮೇಶ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಹಡ್ಸನ್‌ ವೃತ್ತ ಬಳಿಯಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಟ್ಟಡ ಕಬ್ಬನ್‌ ಪಾರ್ಕ್ ವ್ಯಾಪ್ತಿಯಲ್ಲಿದೆಯೇ ಎಂಬ ಬಗ್ಗೆ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್‌ ಹಾಗೂ ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರು ಜಂಟಿಯಾಗಿ ಫೆ.4ರಂದು ಸಮೀಕ್ಷೆ ನಡೆಸಬೇಕು. ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ನಿರ್ದೇಶಕರು, ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಕಬ್ಬನ್‌ ಪಾರ್ಕ್ ಪೊಲೀಸ್‌ ಠಾಣೆಯ ಅಧಿಕಾರಿಗಳು, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿಗಳು, ಜಲ ಮಂಡಳಿ ಅಧಿಕಾರಿಗಳು ಸೇರಿದಂತೆ ಅರ್ಜಿಯಲ್ಲಿನ ಎಲ್ಲ ಪ್ರತಿವಾದಿಗಳು ಹಾಜರಿರುವಂತೆ ನೋಡಿಕೊಳ್ಳಬೇಕು. ಸಮೀಕ್ಷೆಯ ವರದಿಯನ್ನು ಫೆ.8ರಂದು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಸಂಜೆ 6.30 ನಂತರ ಕಬ್ಬನ್‌ ಪಾರ್ಕ್‌ನಲ್ಲಿ ಜನರ ಪ್ರವೇಶ ನಿಷೇಧಿಸಿ ಆದೇಶ

ವಿಚಾರಣೆ ವೇಳೆ ಮಧ್ಯಂತರ ಅರ್ಜಿ ಸಲ್ಲಿಸಿದ ಕೃಷಿಕ ಸಮಾಜದ ಪರ ವಕೀಲರು, ಸಹಕಾರ ಸಂಘವಾಗಿರುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ ರಾಜ್ಯದಲ್ಲಿರುವ ರೈತ ವರ್ಗಕ್ಕೆ ಅಗತ್ಯವಿರುವ ತಾಂತ್ರಿಕ ಸಲಹೆ ನೀಡುತ್ತಿದೆ. ಕೃಷಿ ಉತ್ಪನ್ನಗಳಾದ ಹಣ್ಣು ಮತ್ತು ತರಕಾರಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಿದೆ. 1966ರಲ್ಲಿ ಹಡ್ಸನ್‌ ವೃತ್ತದ ಸಮೀಪದ 53,328 ಚದರ ಅಡಿ ಭೂಮಿಯನ್ನು ಸರ್ಕಾರ ಕೃಷಿಕ ಸಮಾಜಕ್ಕೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಿದೆ. ಪ್ರಸ್ತುತ ಈ ಜಾಗದಲ್ಲಿ ಬೃಹತ್‌ ಕಟ್ಟಡ ನಿರ್ಮಿಸಲಾಗಿದೆ. ಹೈಕೋರ್ಟ್‌ ಅನುಮತಿಯಿಲ್ಲದೆ ಕಟ್ಟಡ ಬಳಕೆಗೆ ಅವಕಾಶವಿಲ್ಲ. ಆದ್ದರಿಂದ ಕಟ್ಟಡ ಬಳಕೆಗೆ ಅನುಮತಿ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ಹೈಕೋರ್ಟ್‌ ಸಮೀಕ್ಷೆ ನಡೆಸಲು ನಿರ್ದೇಶಿಸಿ ಅರ್ಜಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿತು.

Follow Us:
Download App:
  • android
  • ios