ಮಂಡ್ಯ ಜಿಲ್ಲೆಯ  ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ಹೆದ್ದರಿಯಲ್ಲಿ ನಡೆದ ಘಟನೆ. 

ಮಂಡ್ಯ(ಸೆ.27):  ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಮಾರುತಿ ಶಿಫ್ಟ್ ಕಾರು ಹಾಸನ ಕಡೆಯಿಂದ ಬರುತ್ತಿತ್ತು, ಈ ವೇಳೆ ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ರಭಸದಿಂದ ಕಾರು ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. 

ಧಾರವಾಡ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಸಾವು

ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂರು ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.