ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಟೋಲ್ ನಾಕಾದ ಬಳಿ ನಡೆದಿದೆ.
ಬಾಗಲಕೋಟೆ(ಸೆ.26): ಲಾರಿ-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಟೋಲ್ ನಾಕಾದ ಬಳಿ ಇಂದು(ಗುರುವಾರ) ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಧನ್ನೂರ ಟೋಲ್ ನಾಕಾ ಬಳಿ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಮೃತರನ್ನ ಲಕ್ಣ್ಮಣ (55), ಬೈಲಪ್ಪ (45), ರಾಮಣ್ಣ (50), ಕಾರು ಚಾಲಕ ಮಹಮ್ಮದ್ ರಫೀಕ್ ಗುಡ್ನಾಳ (25) ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ: ಸತ್ತ ನಾಯಿಯನ್ನು ಪಕ್ಕಕ್ಕಿಡುವ ವೇಳೆ ಕಾರು ಡಿಕ್ಕಿ, ಯುವಕ ಸಾವು
ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮೂಲದವರಾಗಿದ್ದಾರೆ. ಹುಲಿಗೆಮ್ಮನ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಹುನಗುಂದ ಮೂಲಕ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ.
