ಹುಬ್ಬಳ್ಳಿ(ಡಿ.22): ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಹುಬ್ಬಳ್ಳಿ-ಧಾರವಾಡದ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ, ಮಲ್ಲಿಕಾರ್ಜುನ ಸೇರಿದಂತೆ ನಾಲ್ವರನ್ನ ಬಂಧಿಸಲಾಗಿದೆ. 

ನಗರದ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ. ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.  ಬಂಧಿತರಲ್ಲಿ ಓರ್ನ ನಕಲಿ ಪತ್ರಕರ್ತ ಕೂಡ ಇದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.