Asianet Suvarna News Asianet Suvarna News

ಉಡುಪಿ: ಶಿರ್ವದಲ್ಲಿ ಮದರಸಾದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಮದರಸಾದಲ್ಲಿ ಶಿಕ್ಷಣ ಪಡೆಯುತ್ತಿದ್ದ ಅವರು, ಮಂಗಳವಾರ ಮಧ್ಯಾಹ್ನದ ವೇಳೆ ಮದರಸಾದಿಂದ ಹೊರಗಡೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. ಅವರು ರೈಲು ಹತ್ತಿ ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ. 

Four Students Missing of Madrasa at Shirva in Udupi grg
Author
First Published May 16, 2024, 11:11 AM IST

ಕಾಪು(ಮೇ.16):  ಉಡುಪಿ ಜಿಲ್ಲೆ ಕಾಪುವಿನ ಶಿರ್ವ ಫೈಝುಲ್ ಇಸ್ಲಾಂ ಮದರಸಾದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನದ ವೇಳೆ ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದಾರೆ. 

ಉಡುಪಿ: ಜೈಲಿನಲ್ಲೇ ಹೃದಯಾಘಾತ, ವಿಚಾರಣಾಧೀನ ಕೈದಿ ಸಾವು

ಮದರಸಾದಲ್ಲಿ ಶಿಕ್ಷಣ ಪಡೆಯುತ್ತಿದ್ದ ಅವರು, ಮಂಗಳವಾರ ಮಧ್ಯಾಹ್ನದ ವೇಳೆ ಮದರಸಾದಿಂದ ಹೊರಗಡೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. ಅವರು ರೈಲು ಹತ್ತಿ ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಫೈಝುಲ್ ಇಸ್ಲಾಂ ಎಜುಕೇಶನ್ ಟ್ರಸ್ಟಿನ ಫರ್ವೇಝ್ ಸಲೀಂ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Latest Videos
Follow Us:
Download App:
  • android
  • ios