ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳೆಯರಿಗಾಗಿ ಕೆನರಾ ಬ್ಯಾಂಕ್ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ಆಯೋಜಿಸಿದೆ. 35 ದಿನಗಳ ಈ ತರಬೇತಿಯು ಸ್ವಂತ ಉದ್ಯೋಗ ಆರಂಭಿಸಲು ಬಯಸುವ ನಿರುದ್ಯೋಗಿ ಯುವತಿಯರು ಮತ್ತು ಮಹಿಳೆಯರಿಗೆ ನೆರವಾಗುವ ಗುರಿ ಹೊಂದಿದೆ.
ಬೆಂಗಳೂರು (ju.03): ಸ್ವಂತ ಉದ್ಯೋಗ ಮಾಡುವ ಕನಸು ಹೊಂದಿರುವ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಕೆನರಾ ಬ್ಯಾಂಕ್ ಒಂದು ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು (RSETI) ಉಚಿತವಾಗಿ 'ಬ್ಯೂಟಿ ಪಾರ್ಲರ್' ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ತರಬೇತಿಯ ವಿವರಗಳು:
ಜುಲೈ ತಿಂಗಳ ಮೂರನೆಯ ವಾರದಿಂದ ಈ ತರಬೇತಿ ಕಾರ್ಯಕ್ರಮವು ಆರಂಭವಾಗಲಿದ್ದು, ಒಟ್ಟು 35 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ವೃತ್ತಿಪರ ಕೌಶಲಗಳನ್ನು ಕಲಿಸಿಕೊಡಲಾಗುತ್ತದೆ. ತರಬೇತಿಯ ನಂತರ ಅಭ್ಯರ್ಥಿಗಳು ತಮ್ಮದೇ ಆದ ಬ್ಯೂಟಿ ಪಾರ್ಲರ್ ಆರಂಭಿಸಲು ಈ ಕೋರ್ಸ್ ಸಹಕಾರಿಯಾಗಲಿದೆ.
ಅರ್ಹತೆಗಳೇನು?
ವಯೋಮಿತಿ: ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
ವಿದ್ಯಾರ್ಹತೆ: ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಕಡ್ಡಾಯವಾಗಿ ತಿಳಿದಿರಬೇಕು.
ಆದ್ಯತೆ: ಬಿಪಿಎಲ್ (BPL) ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಗುರಿ: ನಿರುದ್ಯೋಗಿ ಯುವತಿಯರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವುದು ಈ ಯೋಜನೆಯ ಉದ್ದೇಶವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಜುಲೈ 9 ರಂದು ಬೆಳಿಗ್ಗೆ 10:00 ಗಂಟೆಯೊಳಗೆ ತಮ್ಮ ವಿದ್ಯಾರ್ಹತೆ ಮತ್ತು ವಿಳಾಸದ ದಾಖಲಾತಿಗಳೊಂದಿಗೆ (ಆಧಾರ್ ಕಾರ್ಡ್, ರೇಷನ್ ಕಾರ್ಡ್, ಅಂಕಪಟ್ಟಿ ಇತ್ಯಾದಿ) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ ಅಂಚೆ, ಹೊಸಕೋಟೆ ತಾಲ್ಲೂಕು ಇಲ್ಲಿಗೆ ನೇರವಾಗಿ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ನೋಂದಣಿ ಮತ್ತು ಹೆಚ್ಚಿನ ವಿವರಗಳಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 8970476050, 6363139123, 9591514154, 9686248369 ಹಾಗೂ 9886935603. ನಿಮ್ಮ ಕಾಲಿನ ಮೇಲೆ ನೀವು ನಿಂತು ಗೌರವಯುತ ಜೀವನ ನಡೆಸಲು ಇದೊಂದು ಅತ್ಯುತ್ತಮ ವೇದಿಕೆಯಾಗಿದ್ದು, ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

