ರುಡ್ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನವೆಂಬರ್ 5 ರಿಂದ ಆಯೋಜಿಸಿದೆ. ಇದು ವಸತಿಯುತವಾಗಿದ್ದು, ಊಟ ಮತ್ತು ವಸತಿ ಉಚಿತ. 18-45 ವರ್ಷ ವಯಸ್ಸಿನ, ಕನ್ನಡ ಬಲ್ಲ, ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಆದ್ಯತೆ.

ಬೆಂಗಳೂರು ನಗರ ಜಿಲ್ಲೆ (ಸೆ.23): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2025-26ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿಯಲ್ಲಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಹಸುಸಾಗಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ 1.00 ಲಕ್ಷದಿಂದ ಗರಿಷ್ಟ 2.00 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಆಸಕ್ತ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು. ಆಸಕ್ತರು ವೆಬ್ ಸೈಟ್ www.ksbdb.Karnataka.gov.in ನಲ್ಲಿ ಅಕ್ಟೋಬರ್ 31, 2025 ರಂದು ಸಂಜೆ 5.00 ಗಂಟೆಯೊಳೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, #55, ನೆಲ ಮಹಡಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ರಿಸಲ್ದಾರ್ ರಸ್ತೆ, ಶೇಷಾದ್ರಿಪುರ, ಬೆಂಗಳೂರು - 560020 ಅಥವಾ ದೂರವಾಣಿ ಸಂಖ್ಯೆ 080-2960 5888, 8762249230 ಗೆ ಸಂಪರ್ಕಿಸಬಹದು ಎಂದು ಬೆಂಗಳೂರು ನಗರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.