'ಫ್ರೀ ಕಾಶ್ಮೀರ' ಪ್ಲಕಾರ್ಡ್‌ ಪ್ರದರ್ಶನ ದೇಶ ದ್ರೋಹವಲ್ಲ: ಸಿದ್ದು

ಮೈಸೂರು ವಿಶ್ವ ವಿದ್ಯಾಲಯದಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿರುವುದು ದೇಶದ್ರೋಹವಲ್ಲ ಎಂದು ಹೇಳಿದ್ದಾರೆ.

Free Kashmir Placard is not treason says siddaramaiah in mysore

ಮೈಸೂರು(ಜ.22): ಮೈಸೂರು ವಿಶ್ವ ವಿದ್ಯಾಲಯದಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿರುವುದು ದೇಶದ್ರೋಹವಲ್ಲ ಎಂದು ಹೇಳಿದ್ದಾರೆ.

"

ಫ್ರೀ ಕಾಶ್ಮೀರ ಪ್ಲಕಾರ್ಡ್ ಪ್ರದರ್ಶಿಸಿದ ಪ್ರಕರಣದ ಬಗ್ಗೆ ಮಾತನಾಡಿದ ಅವರು, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘದ‌ ನಿರ್ಧಾರ ಮಾಡಿರುವುದು ಅಸಂವಿಧಾನಿಕ. ಆ ರೀತಿ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ ಎಂದು ಹೇಳಿದ್ದಾರೆ.

ಯಾವ ಸ್ಫೋಟವೂ ಆಗದು: ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು

ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಿಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. ಇದರ ವಿರುದ್ಧ ಮೈಸೂರು ವಕೀಲರ ಸಂಘ ವಕಾಲತು ಹಾಕದೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದಿದ್ದಾರೆ.

ಇದನ್ನು ಪ್ರಶ್ನೆ ಮಾಡಿದ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ‌ ಮೇಲೆ ವಕೀಲರಿಂದ ಹಲ್ಲೆಗೆ ಪ್ರಯತ್ನಿಸಲಾಗಿದೆ. ಇಂತಹ ಗೂಂಡಾಗಿರಿಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios