ಹುಬ್ಬಳ್ಳಿ(ಅ.5): ಪೊಲೀಸ್‌ ಕಾನ್ಸ್‌ಟೇಬಲ್‌ ಪರೀಕ್ಷೆಗಳಿಗಾಗಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಅ.14 ರಿಂದ 24ರವರೆಗೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯಕ ಕಚೇರಿ ಕುವೆಂಪು ರಸ್ತೆ, ನವನಗರ ಹುಬ್ಬಳ್ಳಿಯಲ್ಲಿ ಮುಂಜಾನೆ 11 ರಿಂದ ಸಂಜೆ 5 ಗಂಟೆಯವರೆಗೆ ತರಬೇತಿ ನಡೆಯಲಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿಗೆ ಅರ್ಜಿ ಸಲ್ಲಿಸಿದವರು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕಿ ಸಾಧನಾ.ಅ.ಪೋಟೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನವನಗರದ ಕುವೆಂಪು ರಸ್ತೆಯಲ್ಲಿನ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ: 0836-2225288ಗೆ ಸಂಪರ್ಕಿಸಬಹುದು.