ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ: ಸಾಹಿತಿಗಳ ಆತಂಕಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ

ನಮ್ಮ ಸರ್ಕಾರದ ಅವಧಿಯಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. 

Freedom of expression will not be allowed to be compromised Says CM Siddaramaiah gvd

ಬೆಂಗಳೂರು (ಜೂ.25): ನಮ್ಮ ಸರ್ಕಾರದ ಅವಧಿಯಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದಿಂದ ಗಾಂಧಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದಕ್ಕೂ ಮುನ್ನ ಮಾತನಾಡಿದ್ದ ಹಲವು ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಭಂಗ ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದಾಗ, ಇದಕ್ಕೆ ತಮ್ಮ ಭಾಷಣದಲ್ಲೇ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ಅವರು, ಸಾಹಿತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲು ಸರ್ಕಾರ ಬಿಡುವುದಿಲ್ಲ. ಸಾಹಿತಿಗಳ ಬಗ್ಗೆ ತಮಗೆ ಅಪಾರ ಗೌರವ ಇದೆ. ಸಮಾಜವನ್ನು ತಿದ್ದುವ ನಿಮ್ಮ ಗೌರವಕ್ಕೆ ಧಕ್ಕೆ ಬರಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

Shakti Scheme: ತೀರ್ಥಕ್ಷೇತ್ರಗಳಲ್ಲಿ ಮತ್ತೆ ವೀಕೆಂಡ್‌ ರಶ್‌: ಬಸ್‌ಗಳಲ್ಲಿ ಭಾರಿ ಜನ

ಸಮಾಜಮುಖಿಯಾಗಿರಲಿ: ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು. ಈ ಪ್ರಶ್ನೆಗೆ ನಾವು ಸಮಾಧಾನಕರ ಉತ್ತರ ಕಂಡು ಕೊಳ್ಳುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಈ ಬಗ್ಗೆ ಲೇಖಕರು, ಪ್ರಕಾಶಕರು ಯೋಚಿಸುವ ಮೂಲಕ ಸಮಾಜದಲ್ಲಿನ ನ್ಯೂನತೆಗಳನ್ನು ಹೋಗಲಾಡಿಸಬಹುದು ಎಂದು ಕರೆ ನೀಡಿದರು.

ಜಾತಿ ಪದ್ಧತಿಯಿಂದಾಗಿ ಬಹಳ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಈ ಅಸಮಾನತೆ ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಿ ಅಭಿವೃದ್ಧಿ ಸಾಧ್ಯವಿದೆ. ನಮ್ಮ ಸಂವಿಧಾನದ ಉದ್ದೇಶವೂ ಇದೆ ಆಗಿದ್ದು, ಇದೇ ಹಾದಿಯಲ್ಲಿಯೇ ನಮ್ಮ ಅನೇಕ ಬರಹಗಾರರು ಕೆಲಸ ಮಾಡುತ್ತಿದ್ದಾರೆ. ಬರಹಗಾರರು, ಪ್ರಕಾಶಕರು ಸಕ್ರಿಯರಾಗಿದ್ದರೆ ಪುಸ್ತಕೋದ್ಯಮ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಡಾ.ಪಿ.ಎಸ್‌.ಶಂಕರ್‌, ಕೌಶಿಕ್‌ ಕೂಡುರಸ್ತೆ, ಪ್ರೊ.ಬಿ.ಎನ್‌.ಶ್ರೀರಾಮ, ಜಿ.ಎಚ್‌.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿಗಳಾದ ಪ್ರೊ.ಜಿ.ಎಸ್‌.ಸಿದ್ದರಾಮಯ್ಯ, ಮರುಳಸಿದ್ದಪ್ಪ, ಕಮಲಾ ಹಂಪನಾ, ಡಾ.ವಿಜಯಾ, ಡಾ.ವಸುಂಧರಾ ಭೂಪತಿ ಉಪಸ್ಥಿತರಿದ್ದರು.

ನನ್ನ ಅವಧಿ ಮುಗಿದಿದೆ, ಇನ್ನು ವರಿಷ್ಠರ ತೀರ್ಮಾನ: ನಳಿನ್‌ ಕುಮಾರ್‌ ಕಟೀಲ್‌

ಸಾಹಿತ್ಯ ಭಾಗ್ಯ ನೀಡಿ: ನಾಡೋಜ ಹಂ.ಪ.ನಾಗರಾಜಯ್ಯ ಮಾತನಾಡಿ, ಪ್ರಕಾಶಕರು, ಬರಹಗಾರರಿಗೆ ಸಹಾಯಕವಾಗುವಂತೆ 14ನೇ ಬಾರಿಗೆ ಬಜೆಟ್‌ ಮಂಡಿಸಲಿರುವ ಸಿದ್ದರಾಮಯ್ಯ ಅವರು ಯೋಜನೆ ರೂಪಿಸಬೇಕು. ಹಸಿದವರ ಕೂಗು, ತಿಂದವರ ತೇಗನ್ನು ಸರ್ಕಾರ ಕೇಳಿಸಿಕೊಂಡು ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತರುತ್ತಿದೆ. ಇದರ ಬಗೆಗಿನ ಟೀಕೆಗಳಿಗೆ ಕಿವಿಗೊಡಬಾರದು ಎಂದು ಸಲಹೆ ನೀಡಿದರು. ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮೂರು ವರ್ಷದಿಂದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡಿಲ್ಲ. ಬಜೆಟ್‌ನಲ್ಲಿ ಪುಸ್ತಕ ಖರೀದಿಗೆ .25 ಕೋಟಿ, ಜ್ಞಾನಭಾಗ್ಯ ಯೋಜನೆಗೆ .50 ಕೋಟಿ ಮೀಸಲಿಡಬೇಕು ಎಂದು ಮನವಿ ಮಾಡಿದರು.

Latest Videos
Follow Us:
Download App:
  • android
  • ios