Asianet Suvarna News Asianet Suvarna News

ಜ. 30 ರಿಂದ ಫೆ.13ವರೆಗೆ ಉಡುಪಿಯಲ್ಲಿ ಸ್ಪರ್ಶ ಕುಷ್ಟ ರೋಗ ಜಾಗೃತಿ ಅಭಿಯಾನ

ಉಡುಪಿಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ ಸ್ಪರ್ಶ ಕುಷ್ಟ ರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಪ್ರತೀ ಮನೆಗಳಿಗೂ ಭೇಟಿ ನೀಡಿ, ಕುಷ್ಟ ರೋಗದ ಬಗ್ಗೆ ಮಾಹಿತಿ ನೀಡಲಿದ್ದಾರೆ.

From january 30th to Feb 13th Touchy Leprosy Awareness Campaign in Udupi gow
Author
First Published Jan 31, 2023, 5:45 PM IST

ಉಡುಪಿ (ಜ.31): ಕುಷ್ಟ ರೋಗ ಮುಕ್ತ ಸಮಾಜ ನಿರ್ಮಾಣ ಮಾಡುವ ದೆಸೆಯಲ್ಲಿ ಸ್ಪರ್ಶಕುಷ್ಟ ರೋಗ ಜಾಗೃತಿ ಅಭಿಯಾನವನ್ನು ಜಿಲ್ಲೆಯಾದ್ಯಾಂತ ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್‌ನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಶ ಕುಷ್ಟ ಅರಿವು ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜನ ಸಾಮಾನ್ಯರು ಎಲ್ಲಾ ತರಹದ ರೋಗಗಳ ಬಗ್ಗೆ ಆರೋಗ್ಯ ಶಿಕ್ಷಣ ಹೊಂದಿದಾಗ ಮಾತ್ರ ಅವರುಗಳು ರೋಗಗಳ ಬಗ್ಗೆ ಮುಂಜಾಗ್ರತೆ ಹಾಗೂ ಒಂದೊಮ್ಮೆ ಯಾವುದೇ ರೋಗಲಕ್ಷಣಗಳು ಕಂಡಾಗ ತತ್‌ಕ್ಷಣದಲ್ಲಿ ಪರೀಕ್ಷೆಗೆ ಒಳಪಡಿಸಿಕೊಂಡು ಸೂಕ್ತ ಚಿಕಿತ್ಸೆ ಸಾಧ್ಯವಾಗಲಿದೆ ಎಂದರು.

ಕುಷ್ಟ ರೋಗವು ಸಂಪೂರ್ಣ ಗುಣಮುಖವಾಗುವಂತಹ ರೋಗವಾಗಿದ್ದು, ರೋಗದ ಪ್ರಥಮ ಹಂತದಲ್ಲಿಯೇ ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಈ ರೋಗಕ್ಕೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.

ವ್ಯಕ್ತಿಯ ದೇಹದ  ಮೇಲೆ ಯಾವುದೇ ಭಾಗದಲ್ಲಿ ತಿಳಿ ಬಿಳಿ ಅಥವಾ ತಾಮ್ರ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬಂದಲ್ಲಿ ಆರೋಗ್ಯ ಸಹಾಯಕರು ಅಥವಾ ಆಶಾ ಕಾರ್ಯಕರ್ತರನ್ನು ಸಂಪರ್ಕಿಸಿ ಅಥವಾ ನೇರವಾಗಿ ಸಮೀಪದ ಆರೋಗ್ಯ ಕೇಂದ್ರಗಳಿಗೆ ಹೋಗಿ ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.

ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13 ರ ವರೆಗೆ ಸ್ಪರ್ಶ ಕುಷ್ಟ ರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಪ್ರತೀ ಮನೆಗಳಿಗೂ ಭೇಟಿ ನೀಡಿ, ಕುಷ್ಟ ರೋಗದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.

 

MRI ಸ್ಕ್ಯಾನಿಂಗ್ ಏಕೆ ಮಾಡ್ತಾರೆ? ಅದ್ರ ಪ್ರಯೋಜನ ಏನು?

ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ವಿಶೇಷ ಗ್ರಾಮಸಭೆಗಳಲ್ಲಿ, ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯ ಸೇರಿದಂತೆ ಸಾರ್ವಜನಿಕರ ಸ್ಥಳಗಳು, ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್ ಸಂದೇಶಗಳ ಮೂಲಕ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.

ಆಯುಷ್ಮಾನ್‌ ಭಾರತಕ್ಕೆ ಡಿಜಿಟಲ್‌ ವೇಗದ ಸ್ಪರ್ಶ: ಸಚಿವ ಸುಧಾಕರ್‌

ಇದೇ ಸಂದರ್ಭದಲ್ಲಿ ಕುಷ್ಟರೋಗ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಲತಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Follow Us:
Download App:
  • android
  • ios