ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!
ಗಣೇಶನನ್ನು ಕೂರಿಸಿ ಭಕ್ತಾದಿಗಳಿಗೆ ಯಾವುದೇ ಪ್ರಸಾದ ನೀಡಬೇಕೆಂದರೂ FSSAI ಲೈಸೆನ್ಸ್ ಕಡ್ಡಾಯವಾಗಿ ಪಡದಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು (ಸೆ.04): ಗೌರಿ ಗಣೇಶ ಹಬ್ಬದ ನಿಮಿತ್ತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಬೇಕೆಂದರೆ ಕಡ್ಡಾಯವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (Food Safety and Standards Authority of India-FSSAI) ಲೈಸೆನ್ಸ್ ಪಡೆದ ವ್ಯಕ್ತಿಯೇ ಪ್ರಸಾದ ತಯಾರಿಸಿ ವಿತರಣೆ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಹೀಗಾಗಿ, ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರವನ್ನು ಹಿಂದೂ ವಿರೋಧಿ ಸರ್ಕಾರ ಎಂದು ಟೀಕೆ ಮಾಡಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ 'ಸ್ಕ್ಯಾಮ್ ಸಿದ್ದರಾಮಯ್ಯ (siddaramaiah) ನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನ ಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ.
ಲಿಂಗಾಯತ ಮತ್ತು ಇಸ್ಲಾಂ ಧರ್ಮಗಳಲ್ಲಿ ಸಾಮ್ಯತೆ ಇದೆ: ಪಂಡಿತಾರಾದ್ಯ ಸ್ವಾಮೀಜಿ
ಅನ್ಯಮತೀಯರ ಹಬ್ಬಗಳಲ್ಲಿ ಬೀದಿ ಬೀದಿಗಳಲ್ಲಿ ಆಹಾರ ಬೇಯಿಸುವಾಗ ಕೈ ಕಟ್ಟಿಕೊಂಡಿದ್ದ ಸಿದ್ದರಾಮಯ್ಯನವರು, ಈಗ ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ಮುಖ್ಯಮಂತ್ರಿಗಳೇ, ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ. #HinduVirodhiCongress ಎಂದು ಹ್ಯಾಶ್ ಟ್ಯಾಗ್ ಮೂಲಕ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ.
ಸರ್ಕಾರಿ ಆದೇಶದಲ್ಲಿ ಏನಿದೆ?
ಗೌರಿ ಗಣೇಶ ಹಬ್ಬದ ನಿಮಿತ್ತ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆಯುವ ಸಂದರ್ಭದಲ್ಲಿ FSSAI ನೋಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಸಿದ್ಧಪಡಿಸಿದ ಪ್ರಸಾದವನ್ನು ಮಾತ್ರ ಭಕ್ತಾದಿಗಳಿಗೆ ವಿತರಣೆ ಮಾಡಬೇಕು. ಸೆ.6 ಮತ್ತು ಸೆ.7ರಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದುಗಳು ಪಾಲ್ಗೊಳ್ಳಲಿದ್ದು, ಈ ವೇಳೆ ಪ್ರಸಾದ ರೂಪದಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ.
ದಕ್ಷಿಣ ಅಮೇರಿಕಾ ನಿಜಕ್ಕೂ ಪಾತಾಳ ಲೋಕನಾ? ಸಾಕ್ಷ್ಯ ಸಮೇತ ಬಹಿರಂಗ.!
ಈ ಪ್ರಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ವೇಳೆ FSSAI ನೋಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಸಿದ್ಧಪಡಿಸಿದ ಪ್ರಸಾದವನ್ನು ಮಾತ್ರ ವಿತರಣೆ ಮಾಡುವುದರ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಬಿಬಿಎಂಪಿ ವಿಶೇಷ ಆಯುಕ್ತರಿಗೆ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.