ಶಿವಮೊಗ್ಗ: ಸಂಸದರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹ
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಸೋಮವಾರ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ನಿಧಿ ಸಂಗ್ರಹ ಮಾಡಿದರು. ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ನಿಧಿ ಸಂಗ್ರಹಣೆ ನಡೆಸಲಾಯಿತು.
ಶಿವಮೊಗ್ಗ(ಆ.13): ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಸೋಮವಾರ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ನಿಧಿ ಸಂಗ್ರಹ ಮಾಡಿದರು.
ಇಲ್ಲಿನ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ನಿಧಿ ಸಂಗ್ರಹಣೆ ನಡೆಸಲಾಯಿತು. ಸಂತ್ರಸ್ತರ ನೆರವಿಗಾಗಿ ಆರ್‌ಎಸ್‌ಎಸ್ ನಿಂದ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಅಶೋಕ್ ನಾಯ್ಕ, ಎಸ್. ದತ್ತಾತ್ರಿ, ಮಾಲತೇಶ್, ಭವಾನಿರಾವ್ ಮೋರೆ, ಜಗದೀಶ್, ರೇಣುಕಾ ನಾಗರಾಜ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಇದ್ದರು.
ದಾವಣಗೆರೆ: ನೆರೆ ಸಂತ್ರಸ್ತರಿಗೆ 15,000 ರೊಟ್ಟಿ ವಿತರಣೆ