ಬೆಂಗಳೂರು(ಮಾ.04): ಸ್ವಚ್ಛ ಭಾರತ ಅಭಿಯಾನದ ಅನುದಾನ ದುರ್ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ (ಎಸಿಬಿ) ಎಫ್‌ಐಆರ್‌ ದಾಖಲಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನಕ್ಕೆಂದು ಕೇಂದ್ರ ಸರ್ಕಾರ 2015-16, 2017-18ರ ಅವಧಿಯಲ್ಲಿ .1​08.55 ಕೋಟಿ ಬಿಡುಗಡೆ ಮಾಡಿತ್ತು. ಇದರಲ್ಲಿ .92 ಕೋಟಿಯನ್ನು ನಿಯಮ ಉಲ್ಲಂಘಿಸಿ ಸಂಬಂಧವಿಲ್ಲದ ಯೋಜನೆಗಳಿಗೆ ಬಳಸಿದೆ. ಸ್ವಚ್ಛ ಭಾರತ ಅಭಿಯಾನ ಯೋಜನೆಯ ಕಾರ್ಯಗಳಿಗೆ ಬಳಸಿಕೊಳ್ಳದೆ ಇತರೆ ಕಾರ್ಯಕ್ರಮಗಳಾದ ರಸ್ತೆಗಳ ಅಭಿವೃದ್ಧಿ ಕಾರ್ಯಗಳು, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಚರಂಡಿ ಅಭಿವೃದ್ಧಿ ಕಾರ್ಯ ಇತ್ಯಾದಿ ಕಾರ್ಯಕ್ರಮಗಳಿಗೆ ಬಳಸಿದೆ.

ಬಿಜೆಪಿ ಮುಖಂಡನ ಆಪ್ತನ ಕ್ಲಬ್‌ ಮೇಲೆ ಸಿಸಿಬಿ ದಾಳಿ

ಅಲ್ಲದೆ, ಕರ್ನಾಟಕ ಗ್ರಾಮೀಣಾ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಡಿಎಲ್‌) ಸಂಸ್ಥೆಗೆ ಕಾಮಗಾರಿಗಳನ್ನು ವಹಿಸುವ ಮೂಲಕ ಯೋಜನೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ವಿಭಾಗದ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆರೋಪ ಮಾಡಿದ್ದರು.