ಗದಗ(ಡಿ.07): ಇತ್ತೀಚೆಗೆ ಮಹಿಳೆಯರ ಮೇಲೆ ಅತ್ಯಾಚಾರ ಸೇರಿದಂತೆ ವಿವಿಧ ರೀತಿಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಹಿಳೆಯರ ಸುರಕ್ಷತೆಯೇ ಒಂದು ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಹೀಗಾಗಿ ಮಹಿಳೆಯರ ಸುರಕ್ಷತೆಗೆ ಗದಗ ಜಿಲ್ಲಾ ಪೊಲೀಸ್ ಸಹಾಯವಾಣಿಯನ್ನ ಆರಂಭಿಸಿದೆ. 

ಈ ಕುರಿತು ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣ ಟ್ಟಿಟ್ಟರ್ ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಒಂಟಿ ಮಹಿಳೆಯರಿಗೆ ಮನೆಗಳಿಗೆ ತೆರಳಲು ವಾಹನಗಳು ಸಿಗದಿದ್ದ ಪಕ್ಷದಲ್ಲಿ ಪೊಲೀಸ್ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. 9480804400, 100, 112 ಈ ಸಂಖ್ಯೆಗಳಿಗೆ ಕರೆ ಮಾಡಿದರೆ ಪೊಲೀಸರು ತಕ್ಷಣ ಸಹಾಯ ಮಾಡಲಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಹಿಳೆಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಬದ್ಧವಾಗಿದೆ. ಹೀಗಾಗಿ ಈ ಸಂದೇಶವನ್ನು ಎಲ್ಲರಿಗೂ ತುಲುಪಿಸಿ ಮಹಿಳೆಯರು ಇದರ ಸದುಪಯೋಗವನ್ನು ಪಡಿಸಿಕೊಳ್ಳಿ ಎಂದು ಮನವಿ ಮಾಡಿದೆ.