ಶಾಲಾ, ಕಾಲೇಜು ಮಕ್ಕಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟಿಸಿದ ಸರ್ಕಾರ!
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ್ದ 'ಬಾಪೂಜಿ ಪ್ರಬಂಧ ಸ್ಪರ್ಧೆ'ಯ ಫಲಿತಾಂಶ ಪ್ರಕಟವಾಗಿದ್ದು, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ವಿಭಾಗಗಳಲ್ಲಿ ವಿಜೇತರು ಆಯ್ಕೆಯಾಗಿದ್ದಾರೆ.
ಬೆಂಗಳೂರು (ಅ.01): ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ 'ಬಾಪೂಜಿ ಪ್ರಬಂಧ ಸ್ಪರ್ಧೆ' ಯ ಫಲಿತಾಂಶ ಪ್ರಕಟಿಸಲಾಗಿದೆ.
ಪ್ರೌಢಶಾಲೆ ವಿಭಾಗದಲ್ಲಿ ಹರ್ಷಿಣಿ.ಎಂ- ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಆನೇಕಲ್ (ಬೆಂ.ದಕ್ಷಿಣ) (ಪ್ರಥಮ), ಮಿಲನ್ ಗೌಡ.ವಿ– ಶ್ರೀ ವಿದ್ಯಾಮಂದಿರ ಶಿಕ್ಷಣ ಸಂಸ್ಥೆ, (ಬೆಂ.ಉತ್ತರ) (ದ್ವಿತೀಯ), ಶಿವಮ್ಮ.ಎಸ್- ಶ್ರೀ ವೀರಭದ್ರಪ್ಪ ಪ್ರೌಢಶಾಲೆ, ವಿಭೂತಿಪುರ, ದಕ್ಷಿಣ ವಲಯ-03 (ತೃತೀಯ) ಸ್ಥಾನ ಪಡೆದಿದ್ದಾರೆ.
ಪದವಿ ಪೂರ್ವ ವಿಭಾಗದಲ್ಲಿ ರಕ್ಷಿತಾ.ಜಿ- ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಲೇಶ್ವರಂ (ಬೆಂ.ಉತ್ತರ) (ಪ್ರಥಮ), ನಿಶಾ.ಡಿ– ಕೃಪನಿಧಿ ಪದವಿ ಪೂರ್ವ ಕಾಲೇಜು, ಕೋರಮಂಗಲ (ಬೆಂ.ದಕ್ಷಿಣ) (ದ್ವಿತೀಯ), ದಿವ್ಯ.ಎಸ್- ಸರ್ಕಾರಿ ಪದವಿ ಪೂರ್ವ ಕಾಲೇಜು, ಆನೇಕಲ್, (ಬೆಂ.ದಕ್ಷಿಣ) (ತೃತೀಯ) ಸ್ಥಾನ ಪಡೆದಿದ್ದಾರೆ.
BIG Breaking: ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದ್ದ 14 ಸೈಟು ವಾಪಸ್ ಪಡೆದ ಮುಡಾ!
ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಚಂದನ.ಎಲ್- ಎಂ.ಎ. ಆಂಗ್ಲ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ (ಪ್ರಥಮ), ಅಭಿಷೇಕ್.ಎಸ್– ಪ್ರಥಮ ಬಿ.ಎ. ಸರ್ಕಾರಿ ಕಲಾ ಕಾಲೇಜು, ಬೆಂಗಳೂರು (ದ್ವಿತೀಯ), ಚಿತ್ರ.ಪಿ- ಸರ್ಕಾರಿ ಪಥಮ ದರ್ಜೆ ಕಾಲೇಜು, ಯಲಹಂಕ, ಬೆಂಗಳೂರು (ತೃತೀಯ) ಸ್ಥಾನ ಪಡೆದಿದ್ದಾರೆ.
ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ 3,000 ರೂ., 2,000 ರೂ. ಹಾಗೂ 1,000 ರೂ. ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರವನ್ನು ಅ. 2ರಂದು ಬೆಳಗ್ಗೆ 08.00ಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ, ಕೆ.ಜಿ. ರಸ್ತೆ, ಇಲ್ಲಿ ಆಯೋಜಿಸಿರುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು.
ಗದ್ದನಕೇರಿ ರಾಮಾರೂಢ ಶ್ರೀಗಳಿಗೆ 1 ಕೋಟಿ ರೂ. ವಂಚಿಸಿದ್ದ ಜೆಡಿಎಸ್ ನಾಯಕ ಪ್ರಕಾಶ ಮುಧೋಳ ಅರೆಸ್ಟ್!
ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಎಸ್.ಲತಾ ಕುಮಾರಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಜಗದೀಶ್ ನಾಯಕ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವರು ಎಂದು ಇಲಾಖೆಯ ಉಪ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ತಿಳಿಸಿದ್ದಾರೆ.