ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ.

ಗಂಗಾವತಿ (ಮೇ.07): ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಪಕ್ಷದವರೇಯಾಗಿರುವ ಮುಖಂಡ ಹಾಗು ನ್ಯಾಯವಾದಿ ಸೋಮನಾಥ ಪಟ್ಟಣಶೆಟ್ಟಿ ಟೀಕಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರುಗಳ ಒಗ್ಗಟ್ಟಿನ ಕೊರತೆ ಕಾಣುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರಿಂದ ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಇದೇಯೋ ಇಲ್ಲವೋ ಎನ್ನುವಂತಾಗಿದೆ ಎಂದು ತಿಳಿಸಿದ್ದಾರೆ. ಗಂಗಾವತಿ ನಗರದಲ್ಲಿ ಕಾಂಗ್ರೆಸ್ ಪಕ್ಷದವರೇ ಆಗಿರುವ ಇಬ್ಬರು ಮಾಜಿ ಸಚಿವರು, ಮಾಜಿ ಶಾಸಕರು ಇದ್ದರು. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮತ್ತು ಕೊಪ್ಪಳ ಸಂಸದರು ಕಾಂಗ್ರೆಸ್ ಮತ್ತು ಸಚಿವರು ಕಾಂಗ್ರೆಸ್ ಇದ್ದರು ಸಹ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಕುಂಠಿತವಾಗಿದೆ ಎಂದು ದೂರಿರುವ ಅವರು ಆದರೆ ತಾವು ಪಕ್ಷದ ಸಂಘಟನೆಗೆ ಶ್ರಮಿಸುತ್ತೆನೆ ಎಂದು ತಿಳಿಸಿದ್ದಾರೆ.

ಭಿನ್ನಾಭಿಪ್ರಾಯ ಬಿಡಿ

ಈ ಹಿಂದೆ ಕಾಂಗ್ರೆಸ್ ಸರಕಾರ ಬಡವರ ಹಿತ ಕಾಪಾಡಿದ ಇತಿಹಾಸ ಇದೆ. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇದೆ ಮುಖಂಡರುಗಳು ಭಿನ್ನಾಭಿಪ್ರಾಯ ಬಿಟ್ಟು ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಹಿತ ಕಾಪಾಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ. ಮುಂಬರುವ ಎಲ್ಲಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮುಖಂಡರು ಪಕ್ಷದ ಶ್ರೇಯೋಭಿವೃದ್ಧಿಗೆ ದುಡಿಯಬೇಕಾಗಿದೆ ಎಂದರು.