ಕೊಪ್ಪಳದಲ್ಲಿ ವೈರಸ್ ಅಟ್ಟಹಾಸ: ಕೊರೋನಾ ಸಂಕಷ್ಟಕ್ಕೆ ಮಿಡಿದ ಗವಿಸಿದ್ಧೇಶ್ವರ ಶ್ರೀ
ಜಿಲ್ಲಾ ಆಸ್ಪತ್ರೆ ಸೇರಿದಂತೆ ಬಹುತೇಕ ಕಡೆ ಬೆಡ್ ಭರ್ತಿ| ಕೋವಿಡ್ ಕೇರ್ ಸೆಂಟರ್ ತೆರೆಯಲು ಗವಿ ಮಠದ ಶ್ರೀಗಳಿಗೆ ಮನವಿ| ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ ನೀಡಿದ ಗವಿ ಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು| ಇಂತಹ ಇಕ್ಕಟ್ಟಿನ ಸಮಯದಲ್ಲಿ ನಮ್ಮ ಕೈ ಜೋಡಿಸಿದ್ದಕ್ಕೆ ಶ್ರೀಗಳಿಗೆ ಅನಂತ ಧನ್ಯವಾದ ತಿಳಿಸಿದ ಬಿ.ಸಿ.ಪಾಟೀಲ್|
ಕೊಪ್ಪಳ(ಮೇ.07): ಕೊಪ್ಪಳ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೋನಾ ಪ್ರಕರಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಕೊರೋನಾ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಗವಿ ಮಠ ಮುಂದಾಗಿದೆ. 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ತೆರೆಯಲು ಗವಿ ಮಠದ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಒಪ್ಪಿಗೆಯನ್ನ ಸೂಚಿಸಿದ್ದಾರೆ.
ಈ ಬಗ್ಗೆ ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಅವರು, ಸಮಾಜದ ಸೇವೆಗೆ ಸದಾ ಮುಂದಿರುವ ಪೂಜ್ಯರು ಇಂತಹ ಇಕ್ಕಟ್ಟಿನ ಸ್ಥಿತಿಯಲ್ಲಿ ನಮ್ಮ ಜೊತೆ ಕೈಜೋಡಿಸಿರುವುದಕ್ಕೆ ಅನಂತಾನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.
"
ನಮ್ಮ ಮನವಿಗೆ ಸ್ಪಂದಿಸಿದ ಪೂಜ್ಯರು ಮಠದ ವಸತಿ ನಿಲಯವನ್ನು 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಡಿಸಿ, ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ಮಠದ ವೈದ್ಯಕೀಯ ಕಾಲೇಜಿನ ಡಾಕ್ಟರ್‌ಗಳು ಹಾಗೂ ಸಿಬ್ಬಂದಿ ವರ್ಗದವರನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕೊಪ್ಪಳ: ಸ್ವತಃ ಚರಂಡಿ ಸ್ವಚ್ಛಗೊಳಿಸಿದ ಗವಿಸಿದ್ಧೇಶ್ವರ ಶ್ರೀ..!
ಕೋವಿಡ್‌ನ 2ನೇ ಅಲೆಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಂಕಷ್ಟದ ಸಂದರ್ಭದಲ್ಲಿ ಕೊಪ್ಪಳದ ಗವಿಶ್ರೀ ಮಠದಲ್ಲಿ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್‌ನ್ನು ತೆರೆಯಲು ಮಠದ ಶ್ರೀಗಳಾದ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಅವರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಸ್ಥಳೀಯ ಶಾಸಕರು, ಸಂಸದ ಮನವಿ ಮಾಡಿಕೊಂಡಿದ್ದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona