ಬೀದರ್(ಫೆ.03): ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಸುಪ್ರಿಯಾ(15) ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದಾಳೆ.

ಸುಪ್ರಿಯಾ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮೃತ ಸುಪ್ರಿಯಾ ಬೀದರ್ ತಾಲೂಕಿನ ಕೊಳಾರ ಗ್ರಾಮದವಳಾಗಿದ್ದಾಳೆ. ಶ್ರಮಜೀವಿ ವಸತಿ ಶಾಲೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗ್ಲೋಬಲ್ ಮಲ್ಟಿ ಡೆವಲಪ್ಮೆಂಟ್ ಟ್ರಸ್ಟ್ ಅಡಿ ಶ್ರಮಜೀವಿ ಶಾಲೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಮಾಡಲಾಗಿದೆ ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.