ಮೈಸೂರು, (ಮೇ.09): ಪ್ರೇಮಿಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರೋ ಘಟನೆ ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಹೆಚ್​​ಡಿ ಕೋಟೆ ಮೂಲದ ಹುಡುಗನನ್ನ ಪ್ರೀತಿಸುತ್ತಿದ್ದಳು. ನಿನ್ನೆ  (ಬುಧವಾರ) ರಾತ್ರಿ 10 ಗಂಟೆ ಸುಮಾರಿಗೆ ಮೈಸೂರಿನ ಲಿಂಗಾಂಬುಧಿ ಕೆರೆ ಸಮೀಪ ಇಬ್ಬರೂ ಇದ್ದರು. 

ಈ ಪ್ರೇಮಿಗಳನ್ನ ನೋಡಿದ ಕಿರಾತಕರು ಏಕಾಏಕಿ ದಾಳಿ ಮಾಡಿ ಯುವಕನ ಮೇಲೆ ಎರಗಿದ್ದಾರೆ. ಆತನ ಕಾಲ ಮೇಲೆ ಕಲ್ಲು ಎತ್ತಿ ಹಾಕಿ ಹಲ್ಲೆ ನಡೆಸಿದ್ದಾರೆ. 

ಬಳಿಕ ಆತನ ಸಮ್ಮುಖದಲ್ಲೇ ಯುವತಿ ಮೇಲೆ ಮೃಗೀಯವಾಗಿ ಎರಗಿ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ ಸಂತ್ರಸ್ತೆ ಗಂಭೀರ ಸ್ಥಿತಿಯಲ್ಲಿದ್ದು, ಮೈಸೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನಾ ಸ್ಥಳಕ್ಕೆ ಎಸ್​ಪಿ ಅಮಿತ್ ಸಿಂಗ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅತ್ಯಾಚಾರಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.