Bijapur Sainik School ಹೆಣ್ಮಕ್ಕಳಿಗೂ ಪ್ರವೇಶ ಅವಕಾಶ
ಪ್ರಸಕ್ತ ವರ್ಷದಿಂದ ದೈನಂದಿನ ತರಗತಿಗಳಿಗೆ ಬಾಲಕಿಯರಿಗೆ ಪ್ರವೇಶಕ್ಕೆ ಬಿಜಾಪುರ ಸೈನಿಕ ಶಾಲೆ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. 1963 ರಿಂದ ಇದೇ ಮೊಟ್ಟ ಮೊದಲ ಬಾರಿಗೆ ಮಹಿಳಾ ಪ್ರಾಂಶುಪಾಲರು ನೇಮಕವಾಗಿದ್ದಾರೆ.
ವಿಜಯಪುರ (ಮೇ.11): ಬಿಜಾಪುರ ಸೈನಿಕ ಶಾಲೆ (Bijapur Sainik School) ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಪ್ರಸಕ್ತ ವರ್ಷದಿಂದ ದೈನಂದಿನ ತರಗತಿಗಳಿಗೆ ಬಾಲಕಿಯರಿಗೆ ಪ್ರವೇಶಕ್ಕೆ ಅವಕಾಶ ನೀಡಿದೆ. 1963 ರಿಂದ ಇದೇ ಮೊಟ್ಟ ಮೊದಲ ಬಾರಿಗೆ ಮಹಿಳಾ ಪ್ರಾಂಶುಪಾಲರು ನೇಮಕವಾಗಿದ್ದಾರೆ. 2020-21ನೇ ಸಾಲಿಗೆ ಬಾಲಕಿಯರಿಗೂ ಪ್ರವೇಶಾತಿ ನೀಡಿದೆ. ಕೋವಿಡ್ ಕಾರಣದಿಂದ ಶಾಲೆಯಲ್ಲಿ ಇದುವರೆಗೂ ಆನ್ ಲೈನ್ ತರಗತಿ ನಡೆಯುತ್ತಿತ್ತು.
ಆದರೆ ಮೊದಲ ಬಾರಿಗೆ ಭೌತಿಕ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಸದ್ಯ 7 ಮತ್ತು 8ನೇ ತರಗತಿಯಲ್ಲಿ 18 ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಇನ್ನೂ 8-10 ವಿದ್ಯಾರ್ಥಿನಿಯರು ಹಾಜರಾಗಲಿದ್ದಾರೆ.
6ನೇ ತರಗತಿಯ ಒಟ್ಟು ಪ್ರವೇಶಗಳಲ್ಲಿ ಶೇಕಡಾ ಹತ್ತರಷ್ಟು ಬಾಲಕಿಯರಿಗೆ ವಾರ್ಷಿಕವಾಗಿ ಮೀಸಲಿಡಲಾಗುವುದು. ಅವರು ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು" ಎಂದು ಶಾಲೆಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.
NORTH BENGALURU ಮುಂದಿನ ಉದ್ಯಮ ಕೇಂದ್ರ, 3.5ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗ ಸೃಷ್ಟಿ ಸಾಧ್ಯತೆ
ನಮ್ಮಲ್ಲಿ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್ ಮತ್ತು ಮೆಸ್ ಇಲ್ಲ. ಶಾಲೆಯ ಆವರಣದಲ್ಲಿ ಪ್ರತ್ಯೇಕ ಹಾಸ್ಟೆಲ್ ಹಾಗೂ ಇತರೆ ಸೌಲಭ್ಯಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬಾಲಕಿಯರ ಹಾಸ್ಟೆಲ್‌ನಲ್ಲಿ ಮಹಿಳಾ ಸಿಬ್ಬಂದಿಯನ್ನೂ ನಿಯೋಜಿಸಿದ್ದೇವೆ. ಪಾಲಕರು ಸೌಲಭ್ಯಗಳಿಂದ ಸಂತಸಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ತ್ ಅವರು ಮೇ 2 ರಂದು ಪ್ರಿನ್ಸಿಪಾಲ್ ಕಮಾಂಡರ್ ಸುರುಚಿ ಗೌರ್ ಅವರಿಂದ ಶಾಲೆಯ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಉಪ ಕಮಾಂಡ್ ಶಿಕ್ಷಣ ಅಧಿಕಾರಿಯಾಗಿ, ಶಿಕ್ಷಣ ನಿರ್ದೇಶನಾಲಯದಲ್ಲಿ ಜಂಟಿ ನಿರ್ದೇಶಕರಾಗಿ (ಪರೀಕ್ಷೆಗಳು), ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಜಂಟಿ ನಿರ್ದೇಶಕರಾಗಿ (ಪರ್ಸನಲ್ ಏರ್‌ಮೆನ್) ಮತ್ತು ಹೆಡ್‌ಕ್ವಾರ್ಟರ್ಸ್ ಟ್ರೈನಿಂಗ್ ಕಮಾಂಡ್‌ನಲ್ಲಿ ಆಡಳಿತ ತರಬೇತಿ ಕಛೇರಿಯಾಗಿ ಸೇವೆ ಸಲ್ಲಿಸಿದ್ದಾರೆ.
BSF Recruitment 2022: ಖಾಲಿ ಇರುವ 90 ಹುದ್ದೆಗಳಿಗೆ ನೇಮಕಾತಿ
ಸಿಸಿಟಿ ಕಣ್ಗಾವಲಿನಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ: ಪಿಎಸ್‌ಐ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಪರೀಕ್ಷೆ ಅಕ್ರಮ ಹಿನ್ನೆಲೆ ಸರಕಾರ ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (Karnataka Teacher Recruitment 2022) ಪರೀಕ್ಷೆ ಮೇಲೆ ಶಿಕ್ಷಣ ಇಲಾಖೆ (Karnataka Education Department ) ಹದ್ದಿನ ಕಣ್ಣಿಟ್ಟಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಗೋಷ್ಠಿ ನಡೆಸಿ ಮಾತಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ಮೇ. 21 ಮತ್ತು ಮೇ 22 ರಂದು ನಡೆಯಲಿದೆ. ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಈ ಭಾರಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, 1 ಲಕ್ಷದ 6 ಸಾವಿರಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಭದ್ರತೆ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಪೋಲಿಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ಚರ್ಚಿಸಿ ಒಂದಷ್ಟು ಮಾಹಿತಿ ಪಡೆದಿದ್ದೇವೆ ಎಂದರು.
ಒಟ್ಟು 435 ಕೇಂದ್ರಗಳಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳು ಇರಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಎರಡು ಹಂತದಲ್ಲಿ ತಪಾಸಣೆ ನಡೆಯಲಿದೆ. ಪೊಲೀಸರು ಮೊದಲ ಹಂತದಲ್ಲಿ ತಪಾಸಣೆ ನಡೆಸಿದ ಬಳಿಕ ನಮ್ಮ ಇಲಾಖೆಯವರು ಎರಡನೇ ಹಂತದಲ್ಲಿ ತಪಾಸಣೆ ನಡೆಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇನ್ನು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಲವು ನಿಯಮಗಳನ್ನು ಮಾಡಲಾಗಿದ್ದು, ಈ ಬಗ್ಗೆ ಮೇ 14ರಂದು ಪರೀಕ್ಷಾ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಹಾಜರಾಗಬೇಕು. ಯಾರಿಗೂ ಕೈಗಡಿಯಾರಕ್ಕೆ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ವಸ್ತು ಒಯ್ಯುವಂತಿಲ್ಲ. ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಡಿವೈಸ್‌ಗೆ ಅವಕಾಶ ಇಲ್ಲ. ಪ್ರಶ್ನೆಪತ್ರಿಕೆ ಗೌಪ್ಯತೆ, ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಗೋಡೆ ಗಡಿಯಾರ ಅಳವಡಿಸಲಾಗುವುದು ಜೊತೆಗೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿರಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಒಂದು ಕೊಠಡಿಯಲ್ಲಿ 20 ಮಂದಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಮೆಟಲ್ ಡಿಟೆಕ್ಟರ್ ಬಳಕೆ ಬಗ್ಗೆಯೂ ತೀರ್ಮಾನ ಮಾಡಲಾಗಿದೆ. ಅಗತ್ಯವಿರುವ ಸೂಕ್ಷ್ಮ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಬಳಸಲಾಗುವುದು. ಮೂರು ದಿನದ ಮೊದಲೇ ಪರೀಕ್ಷಾ ಕೇಂದ್ರಗಳನ್ನ ವಶಕ್ಕೆ ಪಡೆಯುತ್ತೇವೆ. ಪರೀಕ್ಷಾ ಸಂಬಂಧ ಮೂರು ಕಮಿಟಿಯನ್ನು ಈಗಾಗಲೇ ರಚಿಸಲಾಗಿದೆ.