ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಈ ದೇಶ ಇರುವುದಿಲ್ಲ. ಇನ್ನು ಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ. ವಕ್ಫ್‌ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ಧರಿದ್ದೇವೆ ಎಂದು ಹೇಳಿಕೆ ನೀಡಿದ್ದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು 

ಅಫಜಲ್ಪುರ (ನ.12): 'ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್‌ ಕೊಡಿ' ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಲಬುರಗಿ ಜಿಲ್ಲೆ ಅಫಜಲ್ಪುರದ ಬಸವೇಶ್ವರ ವೃತ್ತದಲ್ಲಿ ಭಾನುವಾರ ವಕ್ಫ್‌ ಆಸ್ತಿ ವಿವಾದ ವಿರುದ್ಧ 'ವಕ್ಫ್‌ ಹಠಾವೋ ದೇಶ ಬಚಾವೋ' ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ತಾಲೂಕಿನ ಮಾಶಾಳದ ಗ್ರಾಮದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಕಾರಿ ಭಾಷಣ ಮಾಡಿದ್ದರು. 

ಮುಡಾ ಹಗರಣ ರಾಜ್ಯಕ್ಕೆ, ಕಾಂಗ್ರೆಸ್‌ ಪಕ್ಷಕ್ಕೆ ಕಪ್ಪು ಚುಕ್ಕೆ: ಕೆ.ಎಸ್‌.ಈಶ್ವರಪ್ಪ

ಶ್ರೀಗಳು ಹೇಳಿದ್ದು 

ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಈ ದೇಶ ಇರುವುದಿಲ್ಲ. ಇನ್ನು ಮುಂದೆ ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು ತಲ್ವಾರ್ ಕೊಡೋಣ. ವಕ್ಫ್‌ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು, ಜೀವ ಕೊಡಲು ಸಿದ್ಧರಿದ್ದೇವೆ ಎಂದು ಹೇಳಿಕೆ ನೀಡಿದ್ದರು.