ಬೆಳಗಾವಿ [ಸೆ.09]: ಕೆಲ ದಿನಗಳ ಹಿಂದೆ ಭಾರೀ ಪ್ರವಾಹದ ಉತ್ತರದ ಜಿಲ್ಲೆಗಳು ತತ್ತರಿಸಿದ್ದವು. ಇದೀಗ ಮತ್ತೊಮ್ಮೆ ಇದೇ ರೀತಿ ವರುಣ ಅಬ್ಬರಿಸುತ್ತಿದ್ದಾನೆ. 

ಪಶ್ಚಿಮ ಘಟ್ಟಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗಾವಿ ಗೋವಾ ಮಧ್ಯದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. 

ರಸ್ತೆಯ ಮೇಲೆ ಗುಡ್ಡದ ಮಣ್ಣು ಹಾಗೂ ಬೃಹತ್ ಬಂಡೆಗಳು ಕುಸಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಳಗಾವಿ ಗಡಿಯ ಚೋರ್ಲಾ ಘಾಟ್ ನಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ರಸ್ತೆ ಮೇಲೆ ದೊಡ್ಡ ದೊಡ್ಡ ಬಂಡೆಗಳು ಉರಳುತ್ತಿವೆ. 

ಗುಡ್ ಕುಸಿದ ಪರಿಣಾಮ ವಾಹನಗಳು ಮಣ್ಣಿನಲ್ಲಿ ಸಿಲುಕಿ ಸವಾರರು ಪರದಾಡುವಂತಾಗಿದೆ. ಸದ್ಯ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೀಡುಬಿಟ್ಟಿದ್ದು, ಸಂಚಾರ ಸುಗಮಗೊಳಿಸಲು ಹರಸಾಹಸಪಡುತ್ತಿದ್ದಾರೆ.